ಬೆಂಗಳೂರು: ಚುನಾವಣೆ ನೀತಿ ಸಂಹಿತೆಯಿಂದಾಗಿ ಜೂನ್ ತಿಂಗಳ ರಾಜ್ಯದ ಮಹಿಳೆಯರ ಸಬಲೀಕರಣಕ್ಕಾಗಿ ಕರ್ನಾಟಕ ರಾಜ್ಯ ಸರ್ಕಾರವು “ಗೃಹ ಲಕ್ಷ್ಮೀ” ಯೋಜನೆ (Gruha Lakshmi Scheme Karnataka) ಯನ್ನು ರೂಪಿಸಿದೆ. ಮಹಿಳೆಯರ ಆರ್ಥಿಕ ಸಬಲೀಕರಣದ ದೃಷ್ಠಿಯಿಂದ ಈ ಯೋಜನೆಯನ್ನು ಜಾರಿಗೆ ತರಲಾಗಿದೆ.
ಕುಟುಂಬದ ನಿರ್ವಹಣೆಯಲ್ಲಿ ಮನೆ ಯಜಮಾನಿಯ ಪಾತ್ರ ಬಹುದೊಡ್ಡದು. ಆದ್ದರಿಂದ ಮನೆಯ ನಿರ್ವಹಣೆಗೆ ಅನುಕೂಲವಾಲೆಂದು ಸರ್ಕಾರವು ಕುಟುಂಬದ ಯಜಮಾನಿಯ ಖಾತೆಗೆ ಪ್ರತಿ ತಿಂಗಳು ರೂ.2,000 ಜಮಾ ಮಾಡಲು ಯೋಜನೆ ಅನುಷ್ಠಾನ ಮಾಡಿದೆ.ಹಣ ಸ್ಪಲ್ಪ ತಡವಾಗಿದೆ. ಇನ್ನೆರಡು ದಿನಗಳಲ್ಲಿ ಬಿಡುಗಡೆಯಾಗಲಿದೆ. ಜುಲೈ ತಿಂಗಳದ್ದು ಇದೇ 15ರೊಳಗೆ ಪಾವತಿಯಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.
“ಗೃಹ ಲಕ್ಷ್ಮಿ” ಯೋಜನೆಯ ಅರ್ಜಿ ಸಲ್ಲಿಸುವುದು ಹೇಗೆ?
“ಗೃಹ ಲಕ್ಷ್ಮಿ” ಯೋಜನೆಯ ಲಾಭ ಪಡೆಯಲು ಕರ್ನಾಟಕ ಒನ್, ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಬಾಪೂಜಿ ಸೇವಾ ಕೇಂದ್ರಗಳಲ್ಲಿ ಉಚಿತವಾಗಿ ಅರ್ಜಿ ಸಲ್ಲಿಸಬಹುದು.
ಅಥವಾ ಸರ್ಕಾರ ನೇಮಿಸಿರುವ ಸ್ವಯಂಸೇವಕ “ಪ್ರಜಾಪ್ರತಿನಿಧಿಗಳು” ಮನೆ ಮನೆಗೆ ತೆರಳಿ ಉಚಿತವಾಗಿ ನೋಂದಣಿ ಮಾಡಿಕೊಳ್ಳುತ್ತಾರೆ.
“ಗೃಹಲಕ್ಷ್ಮಿ ಯೋಜನೆ” ಅರ್ಜಿಯನ್ನು ಉಚಿತವಾಗಿ ನೋಂದಣಿ ಮಾಡಲಾಗುತ್ತದೆ. ಯಾವುದೇ ರೀತಿಯ ಶುಲ್ಕ ಇರುವುದಿಲ್ಲ.
ಆಧಾರ್ ಜೋಡಣೆಯಾಗಿರುವ ಬ್ಯಾಂಕ್ ಖಾತೆಗೆ ದುಡ್ಡು ಜಮಾ ಆಗುತ್ತದೆ. ಅಥವಾ ಫಲಾನುಭವಿಯ ಬೇರೆ ಬ್ಯಾಂಕ್ ಖಾತೆಯ ಪಾಸ್‌ಬುಕ್ ನೀಡಿದರೆ ಆ ಬ್ಯಾಂಕ್ ಖಾತೆಗೆ ಹಣ ಪಡೆಯಬಹುದು.
ಚುನಾವಣೆ ನೀತಿ ಸಂಹಿತೆಯಿಂದಾಗಿ ಜೂನ್ ತಿಂಗಳ ಗೃಹಲಕ್ಷ್ಮಿ ಹಣ ಸ್ಪಲ್ಪ ತಡವಾಗಿದೆ. ಇನ್ನೆರಡು ದಿನಗಳಲ್ಲಿ ಬಿಡುಗಡೆಯಾಗಲಿದೆ. ಜುಲೈ ತಿಂಗಳದ್ದು ಇದೇ 15ರೊಳಗೆ ಪಾವತಿಯಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.#Gruhalakshmi@CMofKarnataka @siddaramaiah @laxmi_hebbalkar pic.twitter.com/pCVJjOol9T
— DIPR Karnataka (@KarnatakaVarthe) July 8, 2024