ಬೆಂಗಳೂರು : ಮಕ್ಕಳನ್ನು ಶಾಲಾ ವಾಹನಗಳಲ್ಲಿ ಶಾಲೆಗೇ ಕಳುಹಿಸುವ ಪೋಷಕರೇ ಎಚ್ಚರ, ಬೆಂಗಳೂರಿನಲ್ಲಿ ಸಂಚಾರಿ ಪೊಲೀಸರು ಇಂದು ಮದ್ಯ ಸೇವಿಸಿ ಶಾಲಾ ವಾಹನ ಚಲಾಯಿಸುತ್ತಿದ್ದ 23 ವಾಹನಗಳ ಚಾಲಕರ ವಿರುದ್ಧ ದೂರು ದಾಖಲಿಸಿದ್ದಾರೆ.
ಬೆಂಗಳೂರಿನಲ್ಲಿ ಇಂದು ಕಾರ್ಯಾಚರಣೆ ನಡೆಸಿರುವ ಸಂಚಾರಿ ಪೊಲೀಸರು ಬರೋಬ್ಬರಿ 23 ಶಾಲಾ ವಾಹನಗಳ ಚಾಲಕರ ವಿರುದ್ಧ 185 ಐಎಂವಿ ಕಾಯ್ದೆಯಡಿ ಪ್ರಕರಣ ದಾಖಲಿಸಿ ವಶಕ್ಕೆ ಪಡೆದುಕೊಂಡಿದ್ದಾರೆ. ಒಟ್ಟು 3016 ವಾಹನಗಳ ತಪಾಸಣೆ ನಡೆಸಲಾಗಿದ್ದು, ಈ ವೇಳೆ ಇನ್ನೂ ಫಿಟ್ನೆಸ್ ಸರ್ಟಿಫಿಕೇಟ್ ಇಲ್ಲದ ೧೧ ವಾಹನಗಳ ವಿರುದ್ಧವೂ ದೂರು ದಾಖಲಾಗಿದೆ.
ಸದ್ಯ ಸಂಚಾರಿ ಪೊಲೀಸರು ಈ ವಾಹನಗಳ ಚಾಲಕರ ವಿರುದ್ಧ ದೂರು ದಾಖಲಿಸಿದ್ದು, ಚಾಲಕರ ಲೈಸೆನ್ಸ್ ಸಸ್ಪೆಂಡ್ ಮಾಡುವಂತೆ ಆರ್ ಟಿಒಗೆ ಸೂಚನೆ ನೀಡಿದ್ದಾರೆ.