ರಾಮನಗರ : ಸಹಕಾರ ಸಂಘದ ಚುನಾವಣೆ ಮುಂದೂಡಿದ ಹಿನ್ನೆಲೆಯಲ್ಲಿ ರಾಮನಗರದಲ್ಲಿ ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ಜೆಡಿಎಸ್ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿದ್ದು, ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದಾರೆ.
ಸಹಕಾರ ಸಂಘದ ಚುನಾವಣೆ ಮುಂದೂಡಿದ ಹಿನ್ನೆಲೆ ಚುನಾವಣೆಗೆ ಪಟ್ಟು ಹಿಡಿದು ರಾಮನಗರದ ಕಂದಾಯ ಭವನದ ಬಳಿ ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ಜೆಡಿಎಸ್ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಪ್ರತಿಭಟನೆ ವಿಕೋಪಕ್ಕೆ ತಿರುಗುತ್ತಿದ್ದಂತೆ ಪೊಲೀಸರು ಲಘು ಲಾಠಿ ಚಾರ್ಜ್ ನಡೆಸಿದ್ದಾರೆ.
ರಾಮನಗರದ ಕಂದಾಯ ಭವನದ ಬಳಿ ಇಂದು ಭಾರಿ ಹೈಡ್ರಾಮಾ ನಡೆದಿದ್ದು, ಪ್ರತಿಭಟನಾಕಾರರು ಹಾಗೂ ಪೊಲೀಸರ ನಡುವೆ ಮಾತಿನ ಚಕಮಕಿ ನಡೆದಿದೆ. ಪೊಲೀಸರು ನಿಖಿಲ್ ಕುಮಾರ್ ಸೇರಿದಂತೆ ಹಲವು ಜೆಡಿಎಸ್ ನಾಯಕರು, ಕಾರ್ಯಕರ್ತರನ್ನು ತಮ್ಮ ವಶಕ್ಕೆ ಪಡೆದುಕೊಂಡಿದ್ದಾರೆ.