ಬೆಂಗಳೂರು: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಅಡಿಯ ವಕ್ಫ್ ಆಸ್ತಿ ಒತ್ತುವರಿ ತೆರವುಗೊಳಿಸುವ ಕಾರ್ಯವನ್ನು ಜಿಲ್ಲಾಧಿಕಾರಿಗಳು ಚುರುಕುಗೊಳಿಸಬೇಕು ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಖಡಕ್ ಸೂಚನೆ ನೀಡಿದ್ದಾರೆ.
ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು DC-CEO ಮತ್ತು ಉಸ್ತುವಾರಿ ಕಾರ್ಯದರ್ಶಿಗಳ ಸಭೆಯನ್ನು ನಡೆಸಿದರು. ಆ ಬಳಿಕ ಮಾತನಾಡಿದಂತ ಅವರು, ರಾಜ್ಯದಲ್ಲಿ 217 ವಕ್ಫ್ ಆಸ್ತಿಗಳ ಒತ್ತುವರಿ ತೆರವು ಕಾರ್ಯ ಬಾಕಿಯಿದೆ. 22581 ವಕ್ಫ್ ಖಾತೆ ಮ್ಯುಟೇಶನ್ ಬಾಕಿಯಿದ್ದು, ಇದನ್ನು ತ್ವರಿತಗೊಳಿಸಬೇಕು. ನ್ಯಾಯಾಲಯಗಳಲ್ಲಿ ತಡೆ ಇರುವ ಪ್ರಕರಣಗಳನ್ನು ತೆರವುಗೊಳಿಸಲು ಕ್ರಮ ಕೈಗೊಳ್ಳಬೇಕು. ಪ್ರಧಾನಮಂತ್ರಿ 15 ಅಂಶಗಳ ಕಾರ್ಯಕ್ರಮವನ್ನು ಸಮರ್ಪಕವಾಗಿ ಜಿಲ್ಲೆಗಳಲ್ಲಿ ಅನುಷ್ಠಾನಗೊಳಿಸಬೇಕು ಎಂದರು.
‘ವಾಲ್ಮೀಕಿ ಅಭಿವೃದ್ಧಿ ನಿಗಮ’ದ ಹಗರಣಕ್ಕೆ ಬಿಗ್ ಟ್ವಿಸ್ಟ್: MD, ಲೆಕ್ಕ ಪರಿಶೋಧಕರ ನಡುವಿನ ‘ಆಡಿಯೋ ವೈರಲ್’
BIG NEWS : ಅನರ್ಹ ʻBPLʼ ಕಾರ್ಡ್ ರದ್ದು : ʻCMʼ ಸಿಎಂ ಸಿದ್ದರಾಮಯ್ಯ ಆದೇಶ