ಬೆಂಗಳೂರು: ಕೆಲ ದಿನಗಳ ಹಿಂದಷ್ಟೇ ಶಾಲಾ ಮಕ್ಕಳಿಗೆ ಸಿಎಂ ಸಿದ್ಧರಾಮಯ್ಯ ಕನ್ನಡ ವ್ಯಾಕರಣದ ಪಾಠ ಮಾಡಿದ್ದರು. ಈಗ ರಾಜ್ಯ ಸರ್ಕಾರದ ಕಾರ್ಯದರ್ಶಿಗೂ ಸಿಎಂ ಸಿದ್ಧರಾಮಯ್ಯ ಪಾಠ ಮಾಡಿದ್ದಾರೆ. ಅದರಲ್ಲೂ ಕುವೆಂಪು ಏನು ಹೇಳಿದ್ದಾರೆ ಗೊತ್ತಾ ಅಂತ ಮನೋಜ್ ಜೈನ್ ಗೆ ಸಿಎಂ ಸಿದ್ಧರಾಮಯ್ಯ ಕುವೆಂಪು ಪಾಠ ಪ್ರಸಂಗ ವಿಧಾನಸೌಧದಲ್ಲಿ ನಡೆದಿದೆ.
ಇಂದು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು DC-CEO ಮತ್ತು ಉಸ್ತುವಾರಿ ಕಾರ್ಯದರ್ಶಿಗಳ ಸಭೆಯನ್ನು ನಡೆಸಿದರು. ಈ ವೇಳೆಯಲ್ಲಿ ಮಾತನಾಡಿದಂತ ಅವರು, ಕುವೆಂಪು ಏನು ಹೇಳಿದಾರೆ ಗೊತ್ತಾ ಅಂತ ಮನೋಜ್ ಜೈನ್ ಗೆ ಸಿಎಂ ಪ್ರಶ್ನಿಸಿ, ಕುವೆಂಪು ಪಾಠ ಮಾಡಿದರು.
ಯಾವುದಾದರೂ ಇಂಗ್ಲಿಷ್ ಪದಕ್ಕೆ ಕನ್ನಡದಲ್ಲಿ ಸೂಕ್ತ ಪದ ಇಲ್ಲದಿದ್ದರೆ ಅದನ್ನು ಇಂಗ್ಲಿಷ್ ನಲ್ಲೇ ಬಳಸಬೇಕು ಎಂದು ಕುವೆಂಪು ಹೇಳಿದಾರೆ ಗೊತ್ತಾ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು DC-CEO ಗಳ ಸಭೆಯಲ್ಲಿ ಪ್ರಸ್ತಾಪಿಸಿದ ಪ್ರಸಂಗ ನಡೆಯಿತು.
ಅಲ್ಪಸಂಖ್ಯಾತ ಇಲಾಖೆ ಚರ್ಚೆ ನಡೆಯುವ ಸಂದರ್ಭದಲ್ಲಿ ಕಾರ್ಯದರ್ಶಿ ಮನೋಜ್ ಜೈನ್ ಅವರು “ಇಂಡೀಕರಣ” ಪದ ಬಳಸಿದರು.
ಈ ವೇಳೆ ಮುಖ್ಯಮಂತ್ರಿಗಳು ಕುವೆಂಪು ಅವರ ಮಾತನ್ನು ಪ್ರಸ್ತಾಪಿಸಿ, ಇಂಡೀಕರಣ ಎಂದರೆ ಹೆಚ್ಚಿನವರಿಗೆ ಅರ್ಥ ಆಗುವುದಿಲ್ಲ. ಹೀಗಾಗಿ Mutation ಪದವನ್ನೇ ಬಳಸಿ ಎನ್ನುತ್ತಾ, “ಯಾವುದಾದರೂ ಇಂಗ್ಲಿಷ್ ಪದಕ್ಕೆ ಕನ್ನಡದಲ್ಲಿ ಸೂಕ್ತ ಪದ ಇಲ್ಲದಿದ್ದರೆ ಅದನ್ನು ಇಂಗ್ಲಿಷ್ ನಲ್ಲೇ ಬಳಸಬೇಕು ಎಂದು ಕುವೆಂಪು ಹೇಳಿದಾರೆ ಗೊತ್ತಾ” ಎಂದು ಕಿರು ಪಾಠ ಮಾಡಿದರು.
ಇಡೀ ಸಭೆ ಕುವೆಂಪು ಪಾಠವನ್ನು ಸಂಭ್ರಮಿಸಿತು.
‘ವಕ್ಫ್ ಆಸ್ತಿ ಒತ್ತುವರಿ’ ತೆರವುಗೊಳಿಸುವಂತೆ ಜಿಲ್ಲಾಧಿಕಾರಿಗಳಿಗೆ ‘ಸಿಎಂ ಸಿದ್ಧರಾಮಯ್ಯ’ ಖಡಕ್ ಸೂಚನೆ
SHOCKING: ರಾಜ್ಯದಲ್ಲಿ ಬೆಚ್ಚಿ ಬೀಳಿಸೋ ಘಟನೆ: ಒಂದೇ ಶಾಲೆಯ ಹತ್ತಾರು ವಿದ್ಯಾರ್ಥಿನಿಯರ ಮೇಲೆ ‘ಲೈಂಗಿಕ ದೌರ್ಜನ್ಯ’