ಬೆಂಗಳೂರು: ನಗರದಲ್ಲಿ ದಿನೇ ದಿನೇ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿವೆ. ಇವುಗಳನ್ನು ನಿಯಂತ್ರಣ ಮಾಡೋದಕ್ಕೆ ಬಿಬಿಎಂಪಿ ಆರೋಗ್ಯ ಇಲಾಖೆ ಕ್ರಮವಹಿಸಿದೆ. ಇದರ ನಡುವೆ ಎಲ್ಲೆಂದರಲ್ಲಿ ಕಸ ಎಸೆಯೋದಕ್ಕೆ ಬ್ರೇಕ್ ಕೂಡ ಹಾಕೋ ಕೆಲಸ ಮಾಡಿದೆ. ಅದಕ್ಕಾಗಿ ನಗರದೆಲ್ಲೆಡೆ ಹೆಚ್ಚುವರಿ ಸಿಸಿಟಿವಿ ಅಳವಡಿಕೆಗೆ ಕ್ರಮ ಕೈಗೊಳ್ಳಲಾಗಿದ್ದು, ಎಲ್ಲೆಂದರಲ್ಲಿ ಕಸ ಎಸೆದವರನ್ನು ಪತ್ತೆ ಹಚ್ಚಿ ಪ್ರಕರಣ ದಾಖಲಿಸೋದಕ್ಕೆ ಮುಂದಾಗಿದೆ.
ಇಂದು ವಿಧಾನಸೌಧದಲ್ಲಿ ರಾಮನಗರ ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರು ಹಾಗೂ ಮುಖಂಡರನ್ನು ಒಳಗೊಂಡ ಡಿಸಿಎಂ ನೇತೃತ್ವದ ನಿಯೋಗವು ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಜಿಲ್ಲೆಯ ಮರುನಾಮಕರಣ ಪ್ರಸ್ತಾವನೆಯನ್ನು ಮುಖ್ಯಮಂತ್ರಿಗಳಿಗೆ ಮಂಗಳವಾರ ನೀಡಿದರು.
ಈ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದಂತ ಬೆಂಗಳೂರು ಜಿಲ್ಲಾ ಉಸ್ತುವಾರಿ ಸಚಿವ ಡಿಸಿಎಂ ಡಿ.ಕೆ ಶಿವಕುಮಾರ್, ಡೆಂಗಿ ಪ್ರಕರಣ ಹೆಚ್ಚಳದ ಬಗ್ಗೆ ಕೇಳಿದಾಗ, “ಎಲ್ಲೆಂದರಲ್ಲಿ ಕಸ ಎಸೆಯುವವವರ ಪ್ರಮಾಣ ಹೆಚ್ಚಾಗುತ್ತಿದೆ. ಇದನ್ನು ತಪ್ಪಿಸಲು ಸಿಸಿಟಿವಿ ಕ್ಯಾಮೆರ ಕಣ್ಗಾವಲು ವ್ಯವಸ್ಥೆ ಮಾಡಲಾಗುವುದು. ಜನರು ಮನೆಯ ಬಳಿ ಬರುವ ಕಸ ಸಂಗ್ರಹ ವಾಹನಗಳಿಗೆ ಕಸವನ್ನು ಹಾಕದೆ ರಸ್ತೆ ಬದಿ ಎಸೆಯುತ್ತಿದ್ದಾರೆ. ಈ ಕಾರಣಕ್ಕೆ ಎಲ್ ಇಡಿ ವಿದ್ಯುತ್ ದೀಪದ ಕಂಬಗಳಿಗೆ ಸಿಸಿಟಿವಿ ಕ್ಯಾಮೆರ ಅಳವಡಿಸಲು ಸೂಚನೆ ನೀಡಲಾಗಿದೆ. ಕಸ ಹಾಗೂ ಕಟ್ಟಡ ನಿರ್ಮಾಣ ತ್ಯಾಜ್ಯ ಸುರಿಯುವವರನ್ನು ಗುರುತಿಸಿ ಪ್ರಕರಣ ದಾಖಲಿಸುವ ಬಗ್ಗೆಯೂ ಸೂಚನೆ ನೀಡಲಾಗಿದೆ” ಎಂದರು.
ಡೆಂಗಿ ನಿಯಂತ್ರಣಕ್ಕೆ ಪಾಲಿಕೆ ಹಾಗೂ ಆರೋಗ್ಯ ಇಲಾಖೆ ಜಂಟಿಯಾಗಿ ಕೆಲಸ ಮಾಡುತ್ತಿವೆ. ಎಲ್ಲಾ ಇಲಾಖೆಗಳ ಮುಖ್ಯಸ್ಥರೊಂದಿಗೆ ಮುಖ್ಯಮಂತ್ರಿಗಳು ಪ್ರತ್ಯೇಕ ಸಭೆ ನಡೆಸುತ್ತಾರೆ ಎಂದರು.
BREAKING: ಅಸಹಜ ಲೈಂಗಿಕ ದೌರ್ಜನ್ಯ ಕೇಸ್: MLC ಸೂರಜ್ ರೇವಣ್ಣ ಜಾಮೀನು ಅರ್ಜಿ ವಜಾ | Suraj Revanna
BIG NEWS : ಅನರ್ಹ ʻBPLʼ ಕಾರ್ಡ್ ರದ್ದು : ʻCMʼ ಸಿಎಂ ಸಿದ್ದರಾಮಯ್ಯ ಆದೇಶ