ನವದೆಹಲಿ: ಇಂದು ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿಯನ್ನು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಭೇಟಿಯಾದರು. ಈ ವೇಳೆ ಕರ್ನಾಟಕದ ಬಾಕಿ ಯೋಜನೆಗಳನ್ನು ಕಾರ್ಯಗತಗೊಳಿಸೋ ಬಗ್ಗೆ ಮಹತ್ವದ ಚರ್ಚೆ ನಡೆಸಿರೋದಾಗಿ ತಿಳಿದು ಬಂದಿದೆ.
ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಕರ್ನಾಟಕದಲ್ಲಿ ಬಾಕಿ ಇರುವ ಸಾರಿಗೆ, ಹೆದ್ದಾರಿ ಯೋಜನೆಗಳನ್ನು ಶೀಘ್ರವೇ ಕಾರ್ಯಗತಗೊಳಿಸಿವುದು, ಹೊಸ ಯೋಜನೆಗಳನ್ನು ಕೈಗೆತ್ತಿಕೊಳ್ಳುವ ಬಗ್ಗೆ ಕೇಂದ್ರ ಸಾರಿಗೆ ಮತ್ತು ಹೆದ್ದಾರಿ ಖಾತೆ ಸಚಿವರಾದ ನಿತಿನ್ ಗಡ್ಕರಿ ಅವರನ್ನು ನವದೆಹಲಿಯಲ್ಲಿ ಭೇಟಿಯಾಗಿ ಮಾತುಕತೆ ನಡೆಸಲಾಯಿತು ಎಂದಿದ್ದಾರೆ.
ಮಂಡ್ಯ ನಗರದ ಹೊರ ವರ್ತುಲ ರಸ್ತೆ ಹಾಗೂ ಹಲಗೂರು – ಕೆ.ಎಂ.ದೊಡ್ಡಿ ರಸ್ತೆಯನ್ನು ಮೇಲ್ದರ್ಜೆಗೇರಿಸಿ ರಾಷ್ಟ್ತ್ರೀಯ ಹೆದ್ದಾರಿಗೆ ಸಂಪರ್ಕ ಕಲ್ಪಿಸುವ ಯೋಜನೆಯ ಬಗ್ಗೆಯೂ ಚರ್ಚಿಸಲಾಯಿತು. ಮಾನ್ಯ ಸಚಿವರು ನನ್ನ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದರು ಎಂದು ತಿಳಿಸಿದ್ದಾರೆ.
ಕೋಲಾರ ಸಂಸದರಾದ ಮಲ್ಲೇಶ್ ಬಾಬು ಅವರು ನನ್ನ ಜತೆಯಲ್ಲಿದ್ದರು.
I had a meeting with the Hon'ble Shri @nitin_gadkari, Union Minister of Transport and Highways, in New Delhi to discuss the acceleration of pending transport and highway projects, as well as the initiation of new projects in Karnataka.
Key topics included upgrading the Mandya… pic.twitter.com/Pz4oXLabgV
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) July 9, 2024
ರಾಜ್ಯದ ಅರಣ್ಯ ವಾಸಿಗಳಿಗೆ ಗುಡ್ ನ್ಯೂಸ್: ಭೂಮಿ ಹಕ್ಕು ಖಾತ್ರಿಪಡಿಸಲು ಅಧಿವೇಶನದಲ್ಲಿ ನಿರ್ಣಯ ಮಂಡನೆ
BIG NEWS : ಅನರ್ಹ ʻBPLʼ ಕಾರ್ಡ್ ರದ್ದು : ʻCMʼ ಸಿಎಂ ಸಿದ್ದರಾಮಯ್ಯ ಆದೇಶ