ಬೀದರ್ : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಇದೀಗ ಡೆಂಗ್ಯೂ ಪ್ರಕರಣಗಳು ಹೆಚ್ಚುತ್ತಿದ್ದು, ಇದೀಗ ರಾಜ್ಯದ ಗಡಿ ಭಾಗದ ಜಿಲ್ಲೆ ಬೀದರ್ ನಲ್ಲೂ ಕೂಡ ಇಂದು ಆರೋ ಹೊಸ ಪ್ರಕರಣಗಳು ಪತ್ತೆಯಾಗಿವೆ.
ಹೌದು ರಾಜ್ಯದ ಗಡಿ ಭಾಗದ ಬೀದರ್ ಜಿಲ್ಲೆಯಲ್ಲಿ ಇಂದು 6 ಹೊಸ ಪ್ರಕರಣಗಳು ಪತ್ತೆಯಾಗಿವೆ. ಜಿಲ್ಲೆಯ ಔರಾದ್, ಭಾಲ್ಕಿ ಹಾಗೂ ಬಸವಕಲ್ಯಾಣದಲ್ಲಿ ತಲಾ 2 ಪ್ರಕರಣಗಳು ಪತ್ತೆಯಾಗಿವೆ. ಜನವರಿ ಇಂದ ಇಲ್ಲಿಯವರೆಗೆ ಒಟ್ಟು 63 ಪ್ರಕರಣಗಳು ಪತ್ತೆಯಾಗಿವೆ ಎಂದು DHO ತಿಳಿಸಿದ್ದಾರೆ.
ಸದ್ಯ ಡೆಂಗ್ಯೂ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಗ್ಯ ಇಲಾಖೆಯು ಹಲವು ಮಾರ್ಗ ಸೂಚಿಗಳನ್ನು ಹೊರಡಿಸಿದ್ದು, ಡೆಂಗ್ಯೂ ಜ್ವರ ಬರದಂತೆ ತಡೆಗಟ್ಟಲು ಹಲವು ಕ್ರಮಗಳನ್ನು ಜಾರಿಗೊಳಿಸಿದ್ದು. ಮುನ್ನೆಚ್ಚರಿಕಾ ಕ್ರಮವಾಗಿ ಎಲ್ಲಾ ಜಿಲ್ಲೆಯ ಆರೋಗ್ಯ ಅಧಿಕಾರಿಗಳು ಈಗಾಗಲೇ ಕ್ರಮ ಕೈಗೊಂಡಿದ್ದಾರೆ.