ಬೆಂಗಳೂರು : ಕರ್ನಾಟಕ ರಾಜ್ಯದಲ್ಲಿ ದಿನಾಂಕ:01-04-2019 ಕ್ಕಿಂತ ಮುಂಚಿತವಾಗಿ ನೋಂದಾಯಿಸಲ್ಪಟ್ಟ ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕಗಳನ್ನು ಅಳವಡಿಸುವ ಕುರಿತು. ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಮಂತ್ರಾಲಯ ಮಹತ್ವದ ಮಾಹಿತಿಯನ್ನು ನೀಡಿದೆ.
ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಮಂತ್ರಾಲಯ ಹೊರಡಿಸಿದ ಆದೇಶದಲ್ಲಿ ದಿನಾಂಕ 04-12-2018, ದಿನಾಂಕ:06-12-2018 ಮತ್ತು ದಿನಾಂಕ:24-09-2019ರಂದು ನಡೆದ ಸಭೆಯಲ್ಲಿ ನೀಡಿದ ಸೂಚನೆಗಳ ಮೇರೆಗೆ, ಕರ್ನಾಟಕ ರಾಜ್ಯದಲ್ಲಿ 1ನೇ ಏಪ್ರಿಲ್ 2019ಕ್ಕಿಂತ ಮುಂಚಿತವಾಗಿ ನೋಂದಣಿಯಾದ ಎಲ್ಲಾ ವಾಹನಗಳಿಗೆ (ಹಳೆಯ/ಅಸ್ತಿತ್ವದಲ್ಲಿರುವ ವಾಹನಗಳು) ಅತಿ ಸುರಕ್ಷಿತ ನೋಂದಣಿ ಫಲಕಗಳನ್ನು (High Security Registration Plates) ಅಳವಡಿಸುವ ಸಲುವಾಗಿ ಕರ್ನಾಟಕ ಸರ್ಕಾರವು ಅಧಿಸೂಚನೆ ಸಂಖ್ಯೆ.TD193 TDO 2021, ದಿನಾಂಕ:17-08-2023ನ್ನು ಹೊರಡಿಸಿರುತ್ತದೆ. ಅದರಂತೆ, ದಿನಾಂಕ:01-04-2019ಕ್ಕಿಂತ ಮುಂಚಿತವಾಗಿ ನೋಂದಣಿಯಾದ ವಾಹನಗಳಿಗೆ ಕರ್ನಾಟಕ ರಾಜ್ಯದಲ್ಲಿ ಅತಿ ಸುರಕ್ಷಿತ ನೋಂದಣಿ ಫಲಕಗಳನ್ನು ಅಳವಡಿಸಲಾಗುತ್ತಿದೆ.
ಸರ್ಕಾರದ ಅಧಿಸೂಚನೆ ಸಂಖ್ಯೆ TD193 TDO 2021, ದಿನಾಂಕ 19-06-2024 ರಲ್ಲಿ 1ನೇ ಏಪ್ರಿಲ್ 2019ಕ್ಕಿಂತ ಮುಂಚಿತವಾಗಿ ನೋಂದಣಿಯಾದ ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕ ಅಳವಡಿಸಲು ದಿನಾಂಕ:15-09-2024 ರವರೆಗೆ ಕಾಲಾವಕಾಶವನ್ನು ವಿಸ್ತರಿಸಲಾಗಿದೆ.
ದಿನಾಂಕ18-08-2023 ರಿಂದ 05-07-2024ರವರೆಗೆ ದಿನಾಂಕ:01-04-2019ಕ್ಕಿಂತ ಮುಂಚಿತವಾಗಿ ನೋಂದಣಿಯಾದ ಒಟ್ಟು 47,64,293 ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕಗಳನ್ನು ಅಳವಡಿಸಲಾಗಿರುತ್ತದೆ.