ಬೆಂಗಳೂರು: ಮಾಜಿ ಸಚಿವ B. ನಾಗೇಂದ್ರ ಮನೆ ಮೇಲೆ ಇಂದು ಬೆಳಗ್ಗೆ ದಾಳಿ ನಡೆಸಿದ್ದು, ಹಲವು ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡು ಪರಿಶೀಲನೆ ನಡೆಸಿದೆ ಎನ್ನಲಾಗಿದೆ.
ಇಂದು ಬೆಳಗ್ಗೆ ಬೆಂಗಳೂರಿನ ಸಂಜಯನಗರದಲ್ಲಿರುವ ಇದಲ್ಲದೇ ಬಳ್ಳಾರಿಯ ನೆಹರು ನಗರದಲ್ಲಿರುವ ನಾಗೇಂದ್ರ ಅವರ ಮನೆ ಮೇಲೆ ಕೂಡ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದು, ಸರಿ ಸುಮಾರು ಎಂಟು ಅಧಿಕಾರಿಗಳ ತಂಡ ದಾಳಿಯಲ್ಲಿ ಭಾಗವಹಿಸಿದ್ದಾರೆ ಎನ್ನಲಾಗಿದೆ.
ಇದಲ್ಲದೇ ಶಾಸಕ ಬಸವರಾಜ ದದ್ದಲ್ ಬೆಂಗಳೂರಿನಲ್ಲಿರುವ ಅವರ ಮೇಲೆ ಕೂಡ ಅಧಿಕಾರಿಗಳು ದಾಳಿ ನಡೆಸಿದ್ದು, ಇಡಿ ಅಧಿಕಾರಿಗಳು ಮಹತ್ವದ ಮಾಹಿತಿಗಳನ್ನು ಕಲೆ ಹಾಕುತ್ತಿದ್ದಾರೆ ಎನ್ನಲಾಗಿದೆ.
ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ 187 ಕೋಟಿ ರೂ. ಹಗರಣದ ಸಂಬಂಧ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಮಾಜಿ ಸಚಿವ ಬಿ.ನಾಗೇಂದ್ರ ಹಾಗೂ ನಿಗಮದ ಅಧ್ಯಕ್ಷ ಹಾಗೂ ರಾಯಚೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಶಾಸಕ ಬಸವನಗೌಡ ದದ್ದಲ್ ಮಂಗಳವಾರ ವಿಶೇಷ ತನಿಖಾ ತಂಡ (ಎಸ್‌ಐಟಿ)ದ ಎದುರು ಹಾಜರಾಗಿ ವಿಚಾರಣೆ ಎದುರಿಸಿದರು.