ಬೆಂಗಳೂರು: ಮಾಜಿ ಸಚಿವ B. ನಾಗೇಂದ್ರ ಮನೆ, ವಾಲ್ಮೀಕಿ ಕಚೇರಿ ಸೇರಿದಂತೆ ಕಡೆ ED ದಾಳಿ ನಡೆಸಿದ್ದು, ಹಲವು ಮಹತ್ವದ ಮಾಹಿತಿಗಳನ್ನು ಕಲೆ ಹಾಕುತ್ತಿದೆ. ಬೆಂಗಳೂರಿನ ವಸಂತ ನಗರದಲ್ಲಿರುವ ವಾಲ್ಮಿಕಿ ಕಚೇರಿ ಮೇಲೆ ಕೂಡ ಇಡಿ ಅಧಿಕಾರಿಗಳು ಇಂದು ಬೆಳ್ಳಂ ಬೆಳಗ್ಗೆ ದಾಳಿ ನಡೆಸಿದಾರೆ ಎನ್ನಲಾಗಿದೆ.
ಇದಲ್ಲದೇ ಬೆಂಗಳೂರು ಮತ್ತು ಬಳ್ಳಾರಿಯಲ್ಲಿರುವ ಮಾಜಿ ಸಚಿವ ಬಿ. ನಾಗೇಂದ್ರ ಅವರ ಮನೆ ಮೇಲೆ ದಾಳಿ ನಡೆಸಿದ್ದಾರ ಅಂತ ತಿಳಿದು ಬಂದಿದೆ. ಬಳ್ಳಾರಿ. ಬೆಂಗಳೂರು, ಹೈದ್ರಬಾದ್ ಸೇರಿದಂತೆ ಒಟ್ಟು 18 ಕಡೆಗಳಲ್ಲಿ ಇಡಿ ಅಧಿಕಾರಿಗಳಿಂದ ದಾಳಿ ನಡೆಸಿರುವ ಮಾಹಿತಿ ಲಭ್ಯವಾಗಿದೆ. ಇದಲ್ಲದೇ ನಿಗಮದ ಅಧ್ಯಕ್ಷ ಹಾಗೂ ರಾಯಚೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಶಾಸಕ ಬಸವನಗೌಡ ದದ್ದಲ್ ಅವರ ಬೆಂಗಳೂರು. ರಾಯಚೂರಿನ ಮನೆ ಮೇಲೆ ಕೂಡ ಕೂಡ ದಾಳಿ ನಡೆಸಿರುವ ಇಡಿ ಅಧಿಕಾರಿಗಳು ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ 187 ಕೋಟಿ ರೂ. ಹಗರಣದ ಸಂಬಂಧ ಪ್ರಮುಖ ಮಾಹಿತಿಗಳನ್ನು,. ಮಹತ್ವದ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.
ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ 187 ಕೋಟಿ ರೂ. ಹಗರಣದ ಸಂಬಂಧ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಮಾಜಿ ಸಚಿವ ಬಿ.ನಾಗೇಂದ್ರ ಹಾಗೂ ನಿಗಮದ ಅಧ್ಯಕ್ಷ ಹಾಗೂ ರಾಯಚೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಶಾಸಕ ಬಸವನಗೌಡ ದದ್ದಲ್ ಮಂಗಳವಾರ ವಿಶೇಷ ತನಿಖಾ ತಂಡ (ಎಸ್ಐಟಿ)ದ ಎದುರು ಹಾಜರಾಗಿ ವಿಚಾರಣೆ ಎದುರಿಸಿದರು.