ಮೈಸೂರು: ವಾಲ್ಮೀಕಿ ನಿಗಮದಲ್ಲಿ ನಡೆದ ಕೋಟ್ಯಂತರ ರೂಪಾಯಿ ಹಗರಣವನ್ನು ಗಂಭೀರವಾಗಿ ಪರಿಗಣಿಸಿರುವ ಇಡಿ, ಇಂದು ನಿಗಮದ ಅಧ್ಯಕ್ಷ ಬಸವನಗೌಡ ದದ್ದಲ್ ಹಾಗೂ ಮಾಜಿ ಸಚಿವ ಬಿ.ನಾಗೇಂದ್ರ ಅವರ ನಿವಾಸಗಳ ಮೇಲೆ ದಾಳಿ ನಡೆಸಿದೆ.
ಈ ನಡುವೆ ಮೈಸೂರಿನಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ವರು ಕಾನೂನು ಅದರ ಕೆಲಸವನ್ನು ಮಾಡಲಿದೆ, ಇದರಲ್ಲಿ ಯಾರು ಕೂಡ ಹಸ್ತಕ್ಷೇಪ ಮಾಡುವುದಿಲ್ಲ ಅಂಥ ತಿಳಿಸಿದರು. ಇದರ ಬಗ್ಗೆ ನಾನು ಹೆಚ್ಚು ಹೇಳುವುದಿಲ್ಲ, ಇಡಿ ದಾಳಿ ಮಾಡಲಿ, ಅದರ ಬಗ್ಗೆ ತಲೆ ಕೆಡಿಸಿಕೊಳ್ಳುವುದಿಲ್ಲ ಅಂತ ತಿಳಿಸಿದರು.
ಇನ್ನೂ ನಾಗೇಂದ್ರ ಆಪ್ತ ನೆಕ್ಕಂಟಿ ನಾಗರಾಜ್, ಸತ್ಯನಾರಾಯಣ್ ವರ್ಮಾ ಸೇರಿ ಹಲವರ ಮನೆ, ಕಚೇರಿಯಲ್ಲೂ ಪರಿಶೀಲನೆ ನಡೆಸಲಾಗುತ್ತಿದೆ. ಬೆಂಗಳೂರು, ಬಳ್ಳಾರಿಯಲ್ಲಿರುವ ಶಾಸಕ ನಾಗೇಂದ್ರ ನಿವಾಸ ಹಾಗೂ ರಾಯಚೂರಿನಲ್ಲಿರುವ ನಿಗಮದ ಅಧ್ಯಕ್ಷ ದದ್ದಲ್ ನಿವಾಸದ ಮೇಲೆ ದಾಳಿ ನಡೆದಿದೆ.