ಬಳ್ಳಾರಿ: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅವ್ಯವಹಾರ, ಅಕ್ರಮ ವರ್ಗಾವಣೆ ಸಂಬಂಧ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಮಾಜಿ ಸಚಿವ ಬಿ.ನಾಗೇಂದ್ರ ನಿವಾಸದ ಮೇಲೆ ದಾಳಿ ನಡೆಸಿದ್ದಾರೆ. ಈ ದಾಳಿಯ ವೇಳೆಯಲ್ಲಿ ಮಹತ್ವದ ದಾಖಲೆಗಳು ಕೂಡ ಪತ್ತೆಯಾಗಿದ್ದಾವೆ ಎನ್ನಲಾಗುತ್ತಿದೆ. ಈ ಬೆನ್ನಲ್ಲೇ ಇಂದು ಇಡಿ ಅಧಿಕಾರಿಗಳಿಂದ ನಾಗೇಂದ್ರ ಅವರನ್ನು ಬಂಧಿಸೋ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
ವಾಲ್ಮೀಕಿ ಅಭಿವೃದ್ಧಿ ನಿಗಮದ ಅವ್ಯವಹಾರ ಪ್ರಕರಣ ಸಂಬಂಧ ಇಡಿ ಅಧಿಕಾರಿಗಳು ಮಾಜಿ ಸಚಿವ ಬಿ.ನಾಗೇಂದ್ರ ಅವರ ನಿವಾಸ, ಆಪ್ತರ ಮನೆಗಳ ಮೇಲೆ ಇಂದು ದಾಳಿ ನಡೆಸಿದ್ದಾರೆ. ನಾಗೇಂದ್ರ ಅವರ ಮನೆಯಲ್ಲಿ ಆಸ್ತಿ ಪತ್ರಗಳು ದೊರೆತಿದ್ದು, ಅವುಗಳನ್ನು ಹಗರಣದಲ್ಲಿ ಬಂದ ಹಣದಿಂದಲೇ ಖರೀದಿಸಲಾಗಿದ್ಯಾ ಅನ್ನೋ ಬಗ್ಗೆ ತನಿಖೆಯನ್ನು ಇಡಿ ಅಧಿಕಾರಿಗಳು ನಡೆಸುತ್ತಿದ್ದಾರೆ.
ಇದರ ನಡುವೆ ಮಾಜಿ ಸಚಿವ ಬಿ.ನಾಗೇಂದ್ರ ಅವರ ಪಿಎ ಹರೀಶ್ ಅವರ ವೀಡಿಯೋ ಆಧಾರಿತ ಹೇಳಿಕೆಯನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಖಲಿಸಿಕೊಂಡಿದ್ದಾರೆ. ಪಿಎ ಹರೀಶ್ ನೀಡಿದಂತ ಹೇಳಿಕೆಯ ಆಧಾರದ ಮೇಲೆ ಮಾಜಿ ಸಚಿವ ಬಿ.ನಾಗೇಂದ್ರ ಅವರನ್ನು ಇಡಿ ಅಧಿಕಾರಿಗಳು ಇಂದು ಸಂಜೆಯ ವೇಳೆಗೆ ಬಂಧಿಸೋ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಈ ಬಗ್ಗೆ ಕಾದು ನೋಡಬೇಕಾಗಿದೆ.
ವಾಲ್ಮೀಕಿ ಅಭಿವೃದ್ಧಿ ನಿಗಮದ ಅವ್ಯವಹಾರ, ಮುಡಾ ಹಗರಣದ ಬಗ್ಗೆ ಸದನದಲ್ಲಿ ಗಂಭೀರ ಚರ್ಚೆ: ಆರ್.ಅಶೋಕ್
BREAKING : ವಾಲ್ಮೀಕಿ ಹಗರಣ ಕೇಸ್ : ಯಾವುದೇ ಕ್ಷಣದಲ್ಲಿ ಮಾಜಿ ಸಚಿವ ಬಿ.ನಾಗೇಂದ್ರ ಬಂಧನ ಸಾಧ್ಯತೆ!