ಬೆಂಗಳೂರು: ರಾಜ್ಯ ಸರ್ಕಾರದಿಂದ ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ ಎನ್ನುವಂತೆ ಕೃಷಿ ಇಲಾಖೆಯಲ್ಲಿ ಖಾಲಿ ಇರುವಂತ 961 ಹುದ್ದೆಗಳ ಭರ್ತಿಗೆ ಮುಂದಾಗಿದೆ. ಇದಕ್ಕಾಗಿ ಕೆಪಿಎಸ್ಸಿಗೆ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಶೀಘ್ರವೇ ಅಧಿಸೂಚನೆ ಹೊರ ಬೀಳಲಿದೆ.
ಕೃಷಿ ಸಚಿವ ಚಲುವರಾಯಸ್ವಾಮಿ ಈ ಬಗ್ಗೆ ಮಾಹಿತಿ ಹಂಚಿಕೊಂಡಿದ್ದು, ಕೃಷಿ ಇಲಾಖೆಯಲ್ಲಿ ಆಡಳಿತ ಸುಧಾರಣೆಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಹಲವು ಕ್ರಮಗಳನ್ನು ಕೈಗೊಳ್ಳಲಾಗಿದೆ. ಮುಂದುವರೆದು ಕೃಷಿ ಇಲಾಖೆಯಲ್ಲಿ ಖಾಲಿ ಇರುವಂತ ವಿವಿಧ ಹುದ್ದೆಗಳ ಭರ್ತಿಗೂ ಕ್ರಮ ವಹಿಸಲಾಗುತ್ತಿದೆ ಎಂದರು.
ಮೊದಲ ಹಂತದಲ್ಲಿ ಕೃಷಿ ಇಲಾಖೆಯಲ್ಲಿ ಖಾಲಿ ಇರುವಂತ 961 ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗುತ್ತಿದೆ. ಈಗಾಗಲೇ ಇದಕ್ಕೆ ಆರ್ಥಿಕ ಇಲಾಖೆಯಿಂದ ಅನುಮೋದನೆ ಕೂಡ ದೊರೆತಿದೆ. ಹೀಗಾಗಿ ಕರ್ನಾಟಕ ಲೋಕಸೇವಾ ಆಯೋಗಕ್ಕೆ ಭರ್ತಿಗಾಗಿ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಮಾಹಿತಿ ನೀಡಿದರು.
ಹುದ್ದೆಗಳ ವಿವರ
- ಕಲ್ಯಾಣ ಕರ್ನಾಟಕ ಭಾಗದಲ್ಲಿ ಕೃಷಿ ಅಧಿಕಾರಿ 34 ಹುದ್ದೆಗಳು
- ಸಹಾಯಕ ಕೃಷಿ ಅಧಿಕಾರಿ 223 ಹುದ್ದೆಗಳು
- ದ್ವಿತೀಯ ದರ್ಜೆ ಸಹಾಯಕರು 17 ಹುದ್ದೆಗಳು
- ಬೆರಳಚ್ಚುಗಾರರು 17 ಹುದ್ದೆಗಳು
- ಉಳಿಕೆ ವೃಂದದಲ್ಲಿ ಕೃಷಿ ಅಧಿಕಾರಿ 84 ಹುದ್ದೆಗಳು
- ಸಹಾಯಕ ಕೃಷಿ ಅಧಿಕಾರಿಗಳು 586 ಹುದ್ದೆಗಳು
BIG NEWS: ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಖಚಿತ: ಸಚಿವ ಎಂ.ಬಿ ಪಾಟೀಲ್ ಘೋಷಣೆ
ಹುಬ್ಬಳ್ಳಿ ನೇಹಾ ಕೊಲೆ ಕೇಸ್ : ಹತ್ಯೆಗೆ ‘ಲವ್ ಜಿಹಾದ್’ ಕಾರಣವಲ್ಲ : ಚಾರ್ಜ್ ಶೀಟ್ ನಲ್ಲಿ ಉಲ್ಲೇಖ!