ಬೆಂಗಳೂರು: ಸಿಎಂ ಸಿದ್ಧರಾಮಯ್ಯ ವಿರುದ್ಧ ಕೇಳಿ ಬಂದಿರುವಂತ ಮುಡಾ ಹಗರಣದ ವಿರುದ್ಧ ಕರ್ನಾಟಕ ಬಿಜೆಪಿ ಸಿಡಿದೆದ್ದಿದೆ. ಈ ಸಂಬಂಧ ಜುಲೈ.12ರಂದು ಮೈಸೂರಲ್ಲಿ ಬೃಹತ್ ಪ್ರತಿಭಟನೆಯನ್ನು ನಡೆಸೋದಕ್ಕೆ ನಿರ್ಧರಿಸಿದೆ.
ಇಂದು ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದಂತ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು,ಮೈಸೂರಿನ ಮೈಸೂರು ಅಭಿವೃದ್ಧಿ ಪ್ರಾಧಿಕಾರದ (ಮೂಡಾ) ಅವ್ಯವಹಾರಕ್ಕೆ ಸಂಬಂಧಿಸಿ ಬಿಜೆಪಿ ವತಿಯಿಂದ ಇದೇ 12ರಂದು ಮೈಸೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದರು.
ಬಿಜೆಪಿ ಈ ಹಗರಣವನ್ನು ಬಹಳ ಗಂಭೀರವಾಗಿ ಪರಿಗಣಿಸಿದೆ. ಇದೇ 12ರಂದು ನಾನು, ವಿಪಕ್ಷ ನಾಯಕ ಆರ್.ಅಶೋಕ್, ಮಾಜಿ ಡಿಸಿಎಂ ಡಾ.ಅಶ್ವತ್ಥನಾರಾಯಣ್, ಬಿಜೆಪಿ ಶಾಸಕರು, ಕಾರ್ಯಕರ್ತರು ಮೈಸೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಲಿದ್ದೇವೆ ಎಂದು ತಿಳಿಸಿದರು.
ಮುಖ್ಯಮಂತ್ರಿಗಳು ಬಡವರ ಬಗ್ಗೆ ಮೊಸಳೆಕಣ್ಣೀರು ಹಾಕುತ್ತಿದ್ದಾರೆ. ಬಡವರಿಗೆ ನಿವೇಶನ ಹಂಚಬೇಕು. ಈಗಾಗಲೇ ನಡೆದ ನಿವೇಶನ ಹಂಚಿಕೆಯನ್ನು ರದ್ದು ಮಾಡಬೇಕು. ಸಿಎಂ, ಅವರ ಪತ್ನಿ ಮೇಲೆ ಆರೋಪ ಇರುವ ಕಾರಣ ಮತ್ತೊಂದು ಎಸ್‍ಐಟಿ ಮಾಡಿ ತನಿಖೆ ನಡೆಸುವುದು ಸೂಕ್ತವಲ್ಲ; ಈ ಭಾರಿ ಮೊತ್ತದ ಹಗರಣದ ತನಿಖೆಯನ್ನು ತಕ್ಷಣವೇ ಸಿಬಿಐಗೆ ಕೊಡಬೇಕು ಎಂದು ಆಗ್ರಹಿಸಿದರು.
ಶಾಸಕರು, ಸಿಎಂ ಪರಮಾಪ್ತರು ನಿನ್ನೆ ಪ್ರೆಸ್ ಮೀಟ್ ಮಾಡಿದ್ದಾರೆ. 92ರಲ್ಲಿ ಭೂ ವಶಕ್ಕೆ ಪಡೆಯುವ ಕೆಲಸ ಶುರುವಾಗಿದೆ. 2004ರಲ್ಲಿ ಪಾರ್ವತಮ್ಮ ಅವರ ಅಣ್ಣ ಜಮೀನು ಖರೀದಿ ಮಾಡಿದ್ದಾರೆ. ಮೂಡಾ ಸ್ವಾಧೀನದಲ್ಲಿದ್ದ ಜಾಗವನ್ನು ಮಲ್ಲಿಕಾರ್ಜುನ ಸ್ವಾಮಿ ಅವರು ಖರೀದಿ ಮಾಡಿದ್ದು ಹೇಗೆ? 2009- 10ರಲ್ಲಿ ಗಿಫ್ಟ್ ಡೀಡ್ ಆದಾಗಲೂ ಸಹ ಈ ಜಾಗವು ಮೂಡಾ ಆರ್‍ಟಿಸಿಯಲ್ಲಿ ನಮೂದಾಗಿತ್ತು. ಭೂಮಿ ಖರೀದಿ ಆಗಿ ಕನ್ವರ್ಷನ್ ಆಗಿತ್ತು. ಗಿಫ್ಟ್ ಡೀಡ್ ಎಂದು ಮಾಹಿತಿ ಕೊಡುವಾಗಲೂ ಅದು ಕೃಷಿ ಭೂಮಿ ಆಗಿರಲಿಲ್ಲ. ಇದು ಕೂಡ ತಪ್ಪು ಮಾಹಿತಿ ಎಂದು ಮಾಹಿತಿ ನೀಡಿದರು.
BREAKING : ವಾಲ್ಮೀಕಿ ಹಗರಣ ಕೇಸ್ : ಯಾವುದೇ ಕ್ಷಣದಲ್ಲಿ ಮಾಜಿ ಸಚಿವ ಬಿ.ನಾಗೇಂದ್ರ ಬಂಧನ ಸಾಧ್ಯತೆ!
ಹುಬ್ಬಳ್ಳಿ ನೇಹಾ ಕೊಲೆ ಕೇಸ್ : ಹತ್ಯೆಗೆ ‘ಲವ್ ಜಿಹಾದ್’ ಕಾರಣವಲ್ಲ : ಚಾರ್ಜ್ ಶೀಟ್ ನಲ್ಲಿ ಉಲ್ಲೇಖ!