ಬೆಂಗಳೂರು: ರಾಜ್ಯ ಸರ್ಕಾರದಿಂದ ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆಗೆ ಅರ್ಜಿ ಸಲ್ಲಿಸಲು ಜುಲೈ.15ರವರೆಗೆ ಅವಧಿ ವಿಸ್ತರಿಸಿ ಆದೇಶಿಸಿದೆ.
ಈ ಸಂಬಂಧ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ 2024-25ನೇ ಸಾಲಿನ ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆಯ ಮಾರ್ಗಸೂಚಿ ಸಂಬಂಧ ಅಧಿಸೂಚನೆ ಹೊರಡಿಸಿದ್ದಾರೆ.
2024-25ನೇ ಸಾಲಿನ ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆಗಳನ್ನು ಸದರಿ ಆದೇಶದಲ್ಲಿ ವಿವರಿಸಿರುವ ಷರತ್ತುಗಳಿಗೊಳಪಟ್ಟು ದಿನಾಂಕ: 09.07.2024ರವರೆಗೆ ಕೈಗೊಳ್ಳಲು ಆಯಾ ಇಲಾಖಾ ಸಚಿವರಿಗೆ ಅಧಿಕಾರ ಪ್ರತ್ಯಾಯೋಜಿಸಿ ಆದೇಶಿಸಲಾಗಿತ್ತು. ಸದರಿ ವರ್ಗಾವಣೆ ಅವಧಿಯನ್ನು ವಿಸ್ತರಿಸುವುದು ಅವಶ್ಯವೆಂದು ಸರ್ಕಾರವು ಪರಿಗಣಿಸಿ ಈ ಕೆಳಕಂಡಂತೆ ಆದೇಶಿಸಿದೆ ಎಂದಿದ್ದಾರೆ.
ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ, ದಿನಾಂಕ: 25.06,2024ರ ಸರ್ಕಾರಿ ಆದೇಶದಲ್ಲಿ ವಿವರಿಸಿರುವ ಷರತ್ತಿಗೊಳಪಟ್ಟು, 2024-25ನೇ ಸಾಲಿನ ಸಾರ್ವತ್ರಿಕ ವರ್ಗಾವಣೆ ಕೈಗೊಳ್ಳಲು ಆಯಾ ಇಲಾಖಾ ಸಚಿವರಿಗೆ ಅಧಿಕಾರ ಪ್ರತ್ಯಾಯೋಜಿಸಲಾಗಿದ್ದ ಅವಧಿಯನ್ನು ದಿನಾಂಕ:15.07.2024 ರವರೆಗೆ ವಿಸ್ತರಿಸಿ ಆದೇಶಿಸಿದ್ದಾರೆ.
BREAKING : ವಾಲ್ಮೀಕಿ ಹಗರಣ ಕೇಸ್ : ಯಾವುದೇ ಕ್ಷಣದಲ್ಲಿ ಮಾಜಿ ಸಚಿವ ಬಿ.ನಾಗೇಂದ್ರ ಬಂಧನ ಸಾಧ್ಯತೆ!