ದಾವಣಗೆರೆ : ಪ್ರಸಕ್ತ ಸಾಲಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳಿಗೆ (ಪಿ.ಯು.ಸಿ ಮತ್ತು ಪಿ.ಯು.ಸಿ ಸಮಾನಾಂತರ ಕೋರ್ಸ್ ನ ವಿದ್ಯಾರ್ಥಿಗಳಿಗೆ ಪ್ರವೇಶಕ್ಕಾಗಿ ಅರ್ಜಿಗಳನ್ನು ರಾಜ್ಯ ವಿದ್ಯಾರ್ಥಿ ನಿಲಯ ತಂತ್ರಾಂಶದ https://shp.karnataka.gov.in ನ ಮೂಲಕ ಆಹ್ವಾನಿಸಲಾಗಿದೆ.
ಆಗಸ್ಟ್ 8 ರೊಳಗಾಗಿ ರಾಜ್ಯ ವಿದ್ಯಾರ್ಥಿನಿಲಯದ ತಂತ್ರಾಂಶದ ಆನ್ಲೈನ್ನಲ್ಲಿ ಅರ್ಜಿಗಳನ್ನು ಸಲ್ಲಿಸಬಹುದು. ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ವಿದ್ಯಾರ್ಥಿನಿಲಯಗಳ ವಿವರ: ಅಲ್ಪಸಂಖ್ಯಾತರ ಮೆಟ್ರಿಕ್ ನಂತರ ಬಾಲಕಿಯರ ವಿದ್ಯಾರ್ಥಿನಿಲಯ, ಕುಂದುವಾಡ ರಸ್ತೆ, 1 & 2, ಅಲ್ಪಸಂಖ್ಯಾತರ ಮೆಟ್ರಿಕ್ ನಂತರ ಬಾಲಕರ ವಿದ್ಯಾರ್ಥಿನಿಲಯ, ಶಿವಕುಮಾರ್ ಸ್ವಾಮಿ ಬಡಾವಣೆ, ದಾವಣಗೆರೆ 1 & 2, ಅಲ್ಪಸಂಖ್ಯಾತರ ಮೆಟ್ರಿಕ್ ನಂತರ ಬಾಲಕ ವಿದ್ಯಾರ್ಥಿನಿಲಯ, ಗುತ್ತೂರು ಕಾಲೋನಿ,ಹರಿಹರ, ಅಲ್ಪಸಂಖ್ಯಾತರ ಮೆಟ್ರಿಕ್ ನಂತರ ಬಾಲಕಿಯರ ವಿದ್ಯಾರ್ಥಿನಿಲಯ, ಕೆರೆಬಿಳಚಿ, ಅಲ್ಪಸಂಖ್ಯಾತರ ಮೆಟ್ರಿಕ್ ನಂತರ ಬಾಲಕರ ವಿದ್ಯಾರ್ಥಿನಿಲಯ, ಜಗಳೂರು ಟೌನ್,
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕಚೇರಿ ದೂ.ಸಂ: 08192-250022 ಹಾಗೂ ತಾಲ್ಲೂಕು ವಿಸ್ತರಣಾಧಿಕಾರಿಗಳ ಕಚೇರಿ ದೂ.ಸಂ: 08192-250066 ಸಂಪರ್ಕಿಸಬಹುದೆಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಮಲ್ಲಿಕಾರ್ಜುನ್ ಮಠದ್ ತಿಳಿಸಿದ್ದಾರೆ.
BREAKING: ರಾಜ್ಯ ಸರ್ಕಾರದಿಂದ ‘ಕರ್ನಾಟಕ ಮಾಧ್ಯಮ ಅಕಾಡೆಮಿ’ ಅಧ್ಯಕ್ಷರಾಗಿ ‘ಆಯೇಷಾ ಖಾನಂ’ ನೇಮಕ
ಹುಬ್ಬಳ್ಳಿ ನೇಹಾ ಕೊಲೆ ಕೇಸ್ : ಹತ್ಯೆಗೆ ‘ಲವ್ ಜಿಹಾದ್’ ಕಾರಣವಲ್ಲ : ಚಾರ್ಜ್ ಶೀಟ್ ನಲ್ಲಿ ಉಲ್ಲೇಖ!