ಮೈಸೂರು : ಸಿಬಿಐನವರಿಂದ ಮಾತ್ರ ಇದರ ತನಿಖೆ ನಡೆಸಲು ಸಾಧ್ಯ. ಹೀಗಾಗಿ ಇಡೀ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ವಿಧಾನಪರಿಷತ್ ಸದಸ್ಯ ಹಾಗೂ ಮಾಜಿ ಸಚಿವ ಎಚ್. ವಿಶ್ವನಾಥ್ ಆಗ್ರಹಿಸಿದರು.
ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಎಂಡಿಎ) ನಡೆದಿರುವ ಅಕ್ರಮ ಸುಮಾರು 10 ಸಾವಿರ ಕೋಟಿಯಷ್ಟಿದೆ. ಇಲ್ಲಿನ ಪೊಲೀಸರಿಂದ ಈ ಪ್ರಕರಣದ ತನಿಖೆ ನಡೆಸಲು ಸಾಧ್ಯವಾಗುವುದಿಲ್ಲ. ಸಿಬಿಐನವರಿಂದ ಮಾತ್ರ ಇದರ ತನಿಖೆ ನಡೆಸಲು ಸಾಧ್ಯ. ಹೀಗಾಗಿ ಇಡೀ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ವಿಧಾನಪರಿಷತ್ ಸದಸ್ಯ ಹಾಗೂ ಮಾಜಿ ಸಚಿವ ಎಚ್. ವಿಶ್ವನಾಥ್ ಆಗ್ರಹಿಸಿದರು.
ಬದಲಿ ನಿವೇಶನ ಪಡೆದಿದ್ದೇನೆ ಎಂದು ನನ್ನ ವಿರುದ್ಧ ಆರೋಪಿಸಿದ್ದಾರೆ. ಎಂಡಿಎ ಅಕ್ರಮದಲ್ಲಿ ನನ್ನ ಪಾಲು ಇದೆ ಎಂದಿದ್ದಾರೆ. ನನ್ನ ಪತ್ನಿಗೆ ದೇವನೂರು 3ನೇ ಹಂತದಲ್ಲಿ ನೀಡಿದ್ದ ನಿವೇಶನದ ಬಳಿ ವರುಣ ನಾಲೆ ಹಾದು ಹೋಗಿದೆ. ಆ ಸ್ಥಳ ಮನೆ ನಿರ್ಮಿಸಲು ಯೋಗ್ಯವಾಗಿರಲಿಲ್ಲ. ಹೀಗಾಗಿ, ಬೇರೆಡೆ ನಿವೇಶನ ನೀಡಿದ್ದಾರಷ್ಟೇ ಎಂದು ಅವರು ಸ್ಪಷ್ಟಪಡಿಸಿದರು.
ನಮ್ಮ ಕುಟುಂಬಕ್ಕೆ ವಿಜಯನಗರ ಬಡಾವಣೆಯಲ್ಲಿ ಸೈಟ್ ಕೊಟ್ಟಿಲ್ಲ. ನನಗೂ ಸಿದ್ದರಾಮಯ್ಯಗೂ ಒಂದೇ ಅವಧಿಯಲ್ಲಿ ನಿವೇಶನ ಮಂಜೂರು ಆಗಿದೆ. ಕೆಳಗಿನ ಸೈಟ್ ಬದಲು ಮೇಲುಗಡೆ ಕೊಟ್ಟಿದ್ದಾರೆ. ನನಗೆ ಸೈಟ್ ಇದೆ ಅನ್ನೋದಾದ್ರೆ ನಿಮಗೆ ಯಾಕೆ ಸೈಟ್ ಇಲ್ಲ? ಈ ವಿಚಾರದಲ್ಲಿ ನನ್ನ ಹೆಂಡತಿಗೊಂದು ನ್ಯಾಯ, ಸಿದ್ದರಾಮಯ್ಯ ಹೆಂಡತಿಗೊಂದು ನ್ಯಾಯವೇ ಎಂದು ಅವರು ಕಿಡಿಕಾರಿದರು.
ಹೀಗಾಗಿ, ಬೇರೆಡೆ ನಿವೇಶನ ನೀಡಿದ್ದಾರಷ್ಟೇ ಎಂದು ಅವರು ಸ್ಪಷ್ಟಪಡಿಸಿದರು. ನನ್ನ ವಿರುದ್ಧ ಆರೋಪ ಮಾಡಿರುವ ಮುಡಾದ ಅಧ್ಯಕ್ಷ ಓರ್ವ ಮೂಢ. ಶಾಸಕ ಕೆ. ಹರೀಶ್ ಗೌಡ ನೀಡಿರುವ ಹೇಳಿಕೆ ಸರಿಯಲ್ಲ. ಎಲ್ಲರೂ ಸೇರಿಕೊಂಡು ಹಗರಣವನ್ನು ಮುಚ್ಚಿ ಹಾಕಲು ಯತ್ನಿಸುತ್ತಿದ್ದಾರೆ. ಹೀಗಾಗಿ, ಎಂಡಿಎಯಲ್ಲಿ ನಡೆದಿರುವ ಬಹುಕೋಟಿ ಹಗರಣವನ್ನು ಸಿಬಿಐ ತನಿಖೆಗೆ ವಹಿಸಬೇಕು. ಇದು ದೊಡ್ಡ ಕರ್ಮಕಾಂಡವಾಗಿದೆ ಎಂದು ಅವರು ಆರೋಪಿಸಿದರು.