ಬೆಂಗಳೂರು: ಚುನಾವಣೆಯ ಸಂದರ್ಭದಲ್ಲಿ ಅಫಿಡವಿಟ್ ನಲ್ಲಿ ಮಾಹಿತಿ ಮುಚ್ಚಿಟ್ಟ ಆರೋಪದಡಿ ಚುನಾವಣಾ ಆಯೋಗಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧ ದೂರು ಸಲ್ಲಿಸಲಾಗಿದೆ.
ಸಾಮಾಜಿಕ ಹೋರಾಟಗಾರ ಅಬ್ರಾಹಂ ಎಂಬುವರು ಮುಖ್ಯ ಚುನಾವಣಾಧಿಕಾರಿಗಳಿಗೆ ದೂರು ಸಲ್ಲಿಸಿದ್ದು, ಅದರಲ್ಲಿ 2013ರ ವಿಧಾನಸಭಾ ಚುನಾವಣೆಯಲ್ಲಿ ಸಿಎಂ ಸಿದ್ಧರಾಮಯ್ಯ ಅವರ ಪತ್ನಿ ಕೃಷಿ ಭೂಮಿಯನ್ನು ಹೊಂದಿದ್ದರೂ, ಮಾಹಿತಿ ಮುಚ್ಚಿಟ್ಟಿರುವುದಾಗಿ ಆರೋಪಿಸಿದ್ದಾರೆ.
ಸಿಎಂ ಸಿದ್ಧರಾಮಯ್ಯ ಅವರ ಪತ್ನಿ ಹೆಸರಿನಲ್ಲಿ 3.16 ಎಕರೆ ಕೃಷಿ ಭೂಮಿ ಇದೆ. ಆದ್ರೇ ಆ ಬಗ್ಗೆ ಚುನಾವಣಾ ಸಂದರ್ಭದಲ್ಲಿ ಸಲ್ಲಿಸಿರುವಂತ ಅಫಿಡವಿಟ್ ನಲ್ಲಿ ಉದ್ದೇಶಪೂರ್ವಕವಾಗೇ ಕಲಂನಲ್ಲಿ ಖಾಲಿ ಬಿಡಲಾಗಿದೆ ಅಂತ ತಿಳಿಸಿದ್ದಾರೆ.
ಚುನಾವಣಾ ಅಫಿಡವಿಟ್ ನಲ್ಲಿ ಕೃಷಿ ಭೂಮಿಯ ಬಗ್ಗೆ ಮಾಹಿತಿ ಮುಚ್ಚಿಟ್ಟ ಸಿಎಂ ಸಿದ್ಧರಾಮಯ್ಯ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಚುನಾವಣಾ ಆಯೋಗಕ್ಕೆ ಸಲ್ಲಿಸಿದಂತ ದೂರಿನಲ್ಲಿ ಕೋರಲಾಗಿದೆ.
ಶಿವಮೊಗ್ಗ: ನಾಳೆ ಸೊರಬದಲ್ಲಿ ‘ವಿಶ್ವ ಜನಸಂಖ್ಯಾ ದಿನಾಚರಣೆ’ ಪ್ರಯುಕ್ತ ‘ಜಾಥಾ ಆಯೋಜನೆ’