Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸರ್ಕಾರಿ ನೌಕರರ ಮೇಲೆ ಹಲ್ಲೆ ಮಾಡಿದ್ರೆ ನಿರ್ದಾಕ್ಷಿಣ್ಯವಾಗಿ ಕ್ರಮ: ಶಿವಮೊಗ್ಗ ಡಿಸಿ ಎಚ್ಚರಿಕೆ

21/08/2025 10:12 PM

ನಿಮ್ಮ ಮನೆಯಲ್ಲಿ ಹಳೆ ‘ಪ್ರೆಶರ್ ಕುಕ್ಕರ್’ ಇದ್ಯಾ.? ಅಯ್ಯೋ, ನಿಮ್ಮ ಹೊಟ್ಟೆಯಲ್ಲಿ ವಿಷ ಇದ್ದಂತೆ.!

21/08/2025 10:10 PM

ಸ್ವಿಗ್ಗಿ ಡಿಲಿವರಿ ಬಾಯ್ಸ್ ಗಳಿಗೆ ಗಮನಕ್ಕೆ: ಹೆಚ್ಚಿ ಬೌನ್ಸ್ ಬಳಸಿ ಪುಡ್ ಡೆಲಿವರಿ ಮಾಡಿ, ಉಚಿತ ಇವಿ ಸ್ಕೂಟರ್ ಗೆಲ್ಲಿ

21/08/2025 9:55 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » 7ನೇ ವೇತನ ಆಯೋಗದ ವರದಿ ಅನುಷ್ಠಾನಕ್ಕೆ ಸದನದಲ್ಲಿ ಚರ್ಚಿಸಲು ಸಿದ್ಧ : ಶಾಸಕ ಎಸ್.ಎನ್.ಚನ್ನಬಸಪ್ಪ
KARNATAKA

7ನೇ ವೇತನ ಆಯೋಗದ ವರದಿ ಅನುಷ್ಠಾನಕ್ಕೆ ಸದನದಲ್ಲಿ ಚರ್ಚಿಸಲು ಸಿದ್ಧ : ಶಾಸಕ ಎಸ್.ಎನ್.ಚನ್ನಬಸಪ್ಪ

By kannadanewsnow5711/07/2024 11:33 AM

ಶಿವಮೊಗ್ಗ : ರಾಜ್ಯ ಸರ್ಕಾರಿ ನೌಕರರು ತಮ್ಮ ನ್ಯಾಯೋಚಿತ ಸೌಲಭ್ಯಗಳನ್ನು ಒದಗಿಸುವಂತೆ ಸರ್ಕಾರಕ್ಕೆ ಸಲ್ಲಿಸಿರುವ ಮನವಿ ಕುರಿತಂತೆ ಮುಂದಿನ ಅಧಿವೇಶನದಲ್ಲಿ ಪ್ರಸ್ತಾಪಿಸಲಾಗುವುದು ಎಂದು ಶಾಸಕ ಎಸ್.ಎನ್.ಚನ್ನಬಸಪ್ಪ ಅವರು ಹೇಳಿದರು.

ಅವರು ಇಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಜಿಲ್ಲಾ ಘಟಕದ ಪದಾಧಿಕಾರಿಗಳು ನಗರದ ಶಾಸಕರ ಭವನದಲ್ಲಿ ಭೇಟಿ ಮಾಡಿ ಸಲ್ಲಿಸಿದ ಮನವಿಯ ಕುರಿತು ಮಾತನಾಡುತ್ತಿದ್ದರು. ಕಾಲಕಾಲಿಕವಾಗಿ ಸರ್ಕಾರವು ನೌಕರರಿಗೆ ನೀಡುವ ವೇತನ ಭತ್ಯೆಗಳನ್ನು ಪರಿಷ್ಕರಿಸಿ ನೀಡಬೇಕು. ಸರ್ಕಾರದ ಜನಪರ ಕಾರ್ಯಕ್ರಮಗಳನ್ನು ಜನಸಾಮಾನ್ಯರಿಗೆ ತಲುಪಿಸುವ ನಿಟ್ಟಿನಲ್ಲಿ ನೌಕರರ ಪಾತ್ರ ಮಹತ್ವದ್ದಾಗಿದೆ ಎಂದರು.

ಎಲ್ಲಾ ಸಂದರ್ಭಗಳಲ್ಲಿಯೂ ಸರ್ಕಾರದ ಜೊತೆಗಿದ್ದು ಕಾರ್ಯನಿರ್ವಹಿಸುವ ನೌಕರರ ಹಿತಕಾಯುವಲ್ಲಿಯೂ ಸರ್ಕಾರವ ವಿಶೇಷ ಕಾಳಜಿ ವಹಿಸಬೇಕು ಎಂದ ಅವರು, ರಾಜ್ಯದಲ್ಲಿ 2.60 ಲಕ್ಷ ಹುದ್ದೆಗಳು ಖಾಲಿಯಿದ್ದರೂ ಸಹ ಸರ್ಕಾರವು ಜನ ಸಾಮಾನ್ಯರ ಕಲ್ಯಾಣ ಹಾಗೂ ರಾಜ್ಯದ ಅಭಿವೃದ್ಧಿಗಾಗಿ ಸರ್ಕಾರ ಜಾರಿಗೊಳಿಸುವ ಯೋಜನೆಗಳನ್ನು ಶ್ರೀಸಾಮಾನ್ಯರಿಗೆ ತಲುಪಿಸುವ ಕಾರ್ಯದ ಜೊತೆ ರಾಜ್ಯದ ಅಭಿವೃದ್ಧಿ ಸೂಚ್ಯಾಂಕದ ಬೆಳವಣಿಗೆಯಲ್ಲಿ ಹಾಗೂ ಜಿ.ಎಸ್.ಟಿ. ತೆರಿಗೆ ಸಂಗ್ರಹಣೆಯಲ್ಲಿ ಇಡೀ ದೇಶಕ್ಕೆ ಮಾದರಿಯಾಗಲು ಸರ್ಕಾರಿ ನೌಕರರ ಪಾತ್ರ ಪ್ರಮುಖವಾಗಿದೆ. ಇಂತಹ ಕಾಯಾರ್ಂಗದ ನೌಕರರ ಬೇಡಿಕೆಗಳನ್ನು ಈಡೇರಿಸುವುದು ಸರ್ಕಾರದ ಜವಾಬ್ದಾರಿಯಾಗಿದೆ ಎಂದವರು ನುಡಿದರು.

ಈ ಸಂದರ್ಭದಲ್ಲಿ ಶಾಸಕರಿಗೆ ಮನವಿ ಸಲ್ಲಿಸಿದ ರಾಜ್ಯ ನೌಕರರ ಸಂಘದ ಉಪಾಧ್ಯಕ್ಷ ಆರ್.ಮೋಹನ್‍ಕುಮಾರ್ ಅವರು ಮಾತನಾಡಿ, ರಾಜ್ಯ 7ನೇ ವೇತನ ಆಯೋಗವು ಸರ್ಕಾರಕ್ಕೆ ಸಲ್ಲಿಸಿರುವ ವರದಿಯನ್ನು ಯಥಾವತ್ತಾಗಿ ಜಾರಿಗೊಳಿಸಿ ಸರ್ಕಾರಿ ಆದೇಶ ಹೊರಡಿಸಬೇಕು. ಈಗಾಗಲೇ ಆಯೋಗವು ವರದಿ ನೀಡಿ ಅನೇಕ ತಿಂಗಳುಗಳೇ ಉರುಳಿವೆ. ಇನ್ನೂ ಕಾಲ ವಿಳಂಬವನ್ನು ನಾವು ಒಪ್ಪಿಕೊಳ್ಳಲಾಗುವುದಿಲ್ಲ ಎಂದರು.

ಸಂಪ್ರದಾಯದಂತೆ ರಾಜ್ಯ 6 ನೇ ವೇತನ ಆಯೋಗದ ವರದಿಯು ಅನುಷ್ಟ್ಟಾನಗೊಂಡು 5 ವರ್ಷಗಳ ಅವಧಿ ಪೂರ್ಣಗೊಂಡಿರುವುದರಿಂದ ರಾಜ್ಯ ಸರ್ಕಾರಿ ನೌಕರರ ವೇತನ ಮತ್ತು ಭತ್ಯೆಗಳನ್ನು ದಿನಾಂಕ:01-07-2022ರಿಂದ ಪರಿಷ್ಕರಣೆಗೊಳಿಸಬೇಕಾಗಿತ್ತು ಎಂದ ಅವರು, ಸಂಘದ ಒತ್ತಡದ ಹಿನ್ನೆಲೆಯಲ್ಲಿ ಈ ಹಿಂದಿನ ಸರ್ಕಾರವು ನಿವೃತ್ತ ಮುಖ್ಯ ಕಾರ್ಯದರ್ಶಿಗಳಾದ ಕೆ.ಸುಧಾಕರ್‍ರಾವ್ ಇವರ ಅಧ್ಯಕ್ಷತೆಯಲ್ಲಿ ರಾಜ್ಯ 7ನೇ ವೇತನ ಆಯೋಗವನ್ನು ರಚಿಸಿ, ಆರು ತಿಂಗಳೊಳಗೆ ಸರ್ಕಾರಕ್ಕೆ ವರದಿ ಸಲ್ಲಿಸಲು ಆದೇಶಿಸಿತ್ತು. ಆದರೆ, ಸರ್ಕಾರವು ಸಕಾಲದಲ್ಲಿ ವರದಿ ಪಡೆಯದೆ ಎರಡು ಬಾರಿ ಅವಧಿಯನ್ನು ವಿಸ್ತರಿಸಿರುವುದು ನೌಕರರಲ್ಲಿ ಅತೀವ ಬೇಸರವನ್ನುಂಟು ಮಾಡಿದೆ ಎಂದರು.

ವೇತನ ಆಯೋಗವು ಮಾರ್ಚ್ ಮಾಹೆಯಲ್ಲಿ ಸರ್ಕಾರಕ್ಕೆ ವರದಿ ಸಲ್ಲಿಸಿದ್ದು, ವೇತನ ಆಯೋಗ ರಚನೆಯಾಗಿ 19 ತಿಂಗಳುಗಳೇ ಕಳೆದಿವೆ. ವೇತನ ಆಯೋಗದ ಮುಂದೆ ಸಂಘವು ನೌಕರರ ವೇತನ-ಭತ್ಯೆಗಳ ಸಂಬಂಧ ಸಮಗ್ರ ವರದಿಯನ್ನು ಸಿದ್ದಪಡಿಸಿ ಶೇ.40% ಫಿಟ್‍ಮೆಂಟ್ ಸೌಲಭ್ಯ ನೀಡಲು ಮನವಿಯನ್ನು ಸಲ್ಲಿಸಿತ್ತು. ಈ ಮಧ್ಯೆ ಸಂಘವು 2023ರ ಮಾರ್ಚ್ ತಿಂಗಳಲ್ಲಿ ಅನಿರ್ಧಿಷ್ಟಾವಧಿ ಮುಷ್ಕರ ಕೈಗೊಂಡ ಪರಿಣಾಮ ಸರ್ಕಾರವು 2023ರ ಏಪ್ರಿಲ್ ಮಾಹೆಯಿಂದ ಅನ್ವಯವಾಗುವಂತೆ ಶೇ. 17% ಮಧ್ಯಂತರ ಪರಿಹಾರವನ್ನು ಮಂಜೂರು ಮಾಡಿ ಆದೇಶ ಹೊರಡಿಸಿತ್ತು. ರಾಜ್ಯ 7ನೇ ವೇತನ ಆಯೋಗದ ವರದಿ ಅನುಷ್ಠಾನಗೊಳಿಸುವ ಸಂಬಂಧ ಮಾನ್ಯ ಮುಖ್ಯಮಂತ್ರಿಗಳನ್ನು ಹಾಗೂ ಆರ್ಥಿಕ ಇಲಾಖೆಯ ಅಧಿಕಾರಿಗಳನ್ನು ಸಂಘದ ನಿಯೋಗ ಭೇಟಿ ಮಾಡಿ ಮನವಿ ಸಲ್ಲಿಸಿದಾಗ್ಯೂ, ನೀತಿ ಸಂಹಿತೆ ಮುಗಿದ ನಂತರ ನೀಡುವ ಭರವಸೆಯನ್ನು ನೀಡಿದ್ದರು ಎಂದವರು ನುಡಿದರು.

ರಾಜ್ಯದ ವಿವಿಧ ಇಲಾಖೆಗಳಲ್ಲಿ 2.60 ಲಕ್ಷ ಖಾಲಿ ಹುದ್ದೆಗಳಿದ್ದು, ಆ ಕಾರ್ಯವನ್ನು ಹಾಲಿ ಇರುವ ಸರ್ಕಾರಿ ನೌಕರರು ಒತ್ತಡದ ನಡುವೆ ಕಾರ್ಯನಿರ್ವಹಿಸುವ ಮೂಲಕ ಸರ್ಕಾರಕ್ಕೆ ಪ್ರತಿ ವರ್ಷ ವಾರ್ಷಿಕ ಅಂದಾಜು 8500 ಕೋಟಿ ಉಳಿತಾಯವಾಗುತ್ತಿದೆ. ರಾಜ್ಯ 7ನೇ ವೇತನ ಆಯೋಗವು ಸರ್ಕಾರಕ್ಕೆ ತನ್ನ ಪೂರ್ಣ ಪ್ರಮಾಣದ ವರದಿಯನ್ನು ಸಲ್ಲಿಸಿ ನಾಲ್ಕು ತಿಂಗಳು ಪೂರ್ಣಗೊಂಡರೂ ಮಾನ್ಯ ಮುಖ್ಯಮಂತ್ರಿಗಳು ಸರ್ಕಾರಿ ನೌಕರರ ಸಮ್ಮೇಳನದಲ್ಲಿ ನೀಡಿದ್ದ ಭರವಸೆಯಂತೆ ವೇತನ ಆಯೋಗದ ವರದಿಯನ್ನು ಅನುಷ್ಠಾನಗೊಳಿಸದೇ ಇರುವುದರಿಂದ ರಾಜ್ಯ ಸರ್ಕಾರದ ಅಧಿಕಾರಿ-ನೌಕರರು ಸಹಜವಾಗಿಯೇ ವೇತನ ಪರಿಷ್ಕರಣೆ ವಿಳಂಬವಾಗುವುದೆಂಬ ಆತಂಕಕ್ಕೆ ಒಳಗಾಗಿ ಸಾಮಾಜಿಕ ಜಾಲತಾಣಗಳ ಮೂಲಕ ಸರ್ಕಾರ ಹಾಗೂ ಸಂಘಟನೆಯ ವಿರುದ್ಧ ಅಸಮದಾನವನ್ನು ವ್ಯಕ್ತಪಡಿಸುತ್ತಿರುವುದು ಎಲ್ಲರಿಗೂ ತಿಳಿದ ಸಂಗತಿಯಾಗಿದೆ ಎಂದರು.

ರಾಜ್ಯ ಸಂಘವು 2024 ಫೆಬ್ರವರಿಯಲ್ಲಿ ಬೆಂಗಳೂರಿನ ಅರಮನೆ ಮೈದಾನದಲ್ಲಿ ಹಮ್ಮಿಕೊಂಡಿದ್ದ ರಾಜ್ಯ ಮಟ್ಟದ ಸಮಾವೇಶವನ್ನು ಉದ್ಘಾಟಿಸಿದ್ದ ಮುಖ್ಯಮಂತ್ರಿಗಳು ಸಮ್ಮೇಳನದಲ್ಲಿ ಭಾಗವಹಿಸಿದ್ದ 2.50 ಲಕ್ಷ ಸರ್ಕಾರಿ ನೌಕರರ ಸಮ್ಮುಖದಲ್ಲಿ ರಾಜ್ಯ 7ನೇ ವೇತನ ಆಯೋಗವು ವರದಿ ನೀಡಿದ ನಂತರ ಅನುಷ್ಠಾನಗೊಳಿಸುವ ಸ್ಪಷ್ಟ ಭರವಸೆ ನೀಡಿದ್ದರು. ರಾಜ್ಯ 7ನೇ ವೇತನ ಆಯೋಗವು ಅಂತಿಮವಾಗಿ 2024ರ ಮಾರ್ಚ್‍ನಲ್ಲಿ ಶೇ.27.5 ಫಿಟ್‍ಮೆಂಟ್ ಸೌಲಭ್ಯದೊಂದಿಗೆ ವೇತನ ಪರಿಷ್ಕರಣೆ ಮಾಡಲು ಸರ್ಕಾರಕ್ಕೆ ವರದಿ ಸಲ್ಲಿಸಿದೆ ಎಂದರು.

ಸಂಘದ ಮತ್ತೊಂದು ಪ್ರಮುಖ ಬೇಡಿಕೆಯಾದ ನೂತನ ಪಿಂಚಣಿಯೋಜನೆಯನ್ನು ರದ್ದುಪಡಿಸಿ ಹಳೆ ಪಿಂಚಣಿ ಯೋಜನೆಯನ್ನು ಮರುಸ್ಥಾಪಿಸುವ ಸಲುವಾಗಿ ಈ ಹಿಂದಿನ ಸರ್ಕಾರ ಇತರೆ ರಾಜ್ಯಗಳಿಗೆ ಭೇಟಿ ನೀಡಿ ಅಧ್ಯಯನ ನಡೆಸಿ ವರದಿ ನೀಡಲು ಸರ್ಕಾರ 2023ರ ಮಾರ್ಚ್‍ನಲ್ಲಿ ಅಪರ ಮುಖ್ಯ ಕಾರ್ಯದರ್ಶಿಗಳ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ರಚಿಸಿತು. ಸಮಿತಿಯು ಇದುವರೆವಿಗೂ ಒಂದೂ ಸಭೆಯನ್ನು ನಡೆಸಿಲ್ಲ ಹಾಗೂ ಹಳೆ ಪಿಂಚಣಿ ಯೋಜನೆಯನ್ನು ಮರುಸ್ಥಾಪಿಸಿರುವ ರಾಜ್ಯಗಳಿಗೆ ಭೇಟಿ ನೀಡಿ ಅಧ್ಯಯನವನ್ನು ಸಹ ನಡೆಸಿರುವುದಿಲ್ಲ. ಅಲ್ಲದೆ ಈ ಸಂಬಂಧ ಸರ್ಕಾರಕ್ಕೆ ಯಾವುದೇ ವರದಿಯನ್ನು ಇಲ್ಲಿಯವರೆವಿಗೂ ನೀಡದಿರುವುದು ನೌಕರರಲ್ಲಿ ಅತೀವ ನೋವನ್ನುಂಟು ಮಾಡಿದೆ ಎಂದರು.

ಚುನಾವಣಾ ಪ್ರಣಾಳಿಕೆಯಲ್ಲಿಯೂ ಸರ್ಕಾರ ಹಳೆ ಪಿಂಚಣಿ ಯೋಜನೆ ಜಾರಿಗೊಳಿಸುವ ಭರವಸೆಯನ್ನು ನೀಡಿತ್ತು. ಕೆಲವು ನೆರೆಯ ಕೆಲವು ರಾಜ್ಯಗಳಲ್ಲಿ ಎನ್.ಪಿ.ಎಸ್. ರದ್ದುಪಡಿಸಿ ಓ.ಪಿ.ಎಸ್. ಜಾರಿಗೊಳಿಸಲು ಆದೇಶ ಹೊರಡಿಸಿವೆ. ಎನ್.ಪಿ.ಎಸ್. ಯೋಜನೆಯಲ್ಲಿ ನೇಮಕಗೊಂಡು ನಿವೃತ್ತಿಯಾಗಿರುವ ಸರ್ಕಾರಿ ನೌಕರರಿಗೆ ಮಾಸಿಕ ಕೇವಲ ರೂ.1500 ಪಿಂಚಣಿ ಲಭ್ಯವಾಗುತ್ತಿದ್ದು, ರಾಜ್ಯದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸುಮಾರು 2.50 ಲಕ್ಷ ಎನ್.ಪಿ.ಎಸ್ ಯೋಜನೆ ವ್ಯಾಪ್ತಿಯ ನೌಕರರ ಸಂಧ್ಯಾಕಾಲದ ಬದುಕು ಆರ್ಥಿಕ ಭದ್ರತೆಯಿಲ್ಲದೆ ದುಸ್ತರಗೊಳ್ಳುತ್ತಿದ್ದು, ಸರ್ಕಾರ ಅಂತಹ ನೌಕರರ ಕುಟುಂಬದ ನೆರವಿಗೆ ಧಾವಿಸಬೇಕಾದ ತುರ್ತು ಅಗತ್ಯವಿದೆ ಎಂದರು.

ರಾಜ್ಯ ಸರ್ಕಾರಿ ನೌಕರರು ಮತ್ತು ಅವರ ಅವಲಂಬಿತ ಕುಟುಂಬ ಸದಸ್ಯರಿಗೆ ನಗದುರಹಿತ ಚಿಕಿತ್ಸೆ ನೀಡುವ “ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ” (ಕೆ.ಎ.ಎಸ್.ಎಸ್)ಗೆ ಈ ಹಿಂದಿನ ರಾಜ್ಯ ಸರ್ಕಾರವು 2021-22ರ ಆಯವ್ಯದಲ್ಲಿ ಘೋಷಿಸಿತ್ತು. ಸಚಿವ ಸಂಪುಟದ ಅನುಮೋದನೆ ಪಡೆದು ಈ ಯೋಜನೆಯ ರೂಪುರೇಷೆಗಳನ್ನು ಸಿದ್ಧಪಡಿಸಿ ನಿರ್ವಹಣೆ ಮಾಡಲು ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟಿಗೆ ಜವಾಬ್ದಾರಿಯನ್ನು ನೀಡಿ 2022ರ ಸೆಪ್ಟಂಬರ್‍ನಲ್ಲಿ ಸರ್ಕಾರ ಆದೇಶ ಹೊರಡಿಸಿತ್ತು. ಹಿಂದಿನ ಸರ್ಕಾರದ ಮುಖ್ಯಮಂತ್ರಿಗಳು ಈ ಯೋಜನೆಯನ್ನು 2023ರ ಮಾರ್ಚ್‍ನಲ್ಲಿ ಸಾಂಕೇತಿಕವಾಗಿ ಲೋಕಾರ್ಪಣೆ ಮಾಡಿದ್ದರು ಎಂದ ಅವರು, ಈ ಯೋಜನೆಗೆ ರಾಜ್ಯ ಸರ್ಕಾರಿ ನೌಕರರ ವೇತನದಿಂದ ಪ್ರತಿ ತಿಂಗಳು ವೃಂದವಾರು ವಂತಿಗೆ ಕಟಾವಣೆಯಾಗಲಿದ್ದು, ಸರ್ಕಾರಕ್ಕೆ ಹೆಚ್ಚಿನ ಆರ್ಥಿಕ ಹೊರೆಯಾಗದು ಎಂದರು.

ರಾಜ್ಯದಲ್ಲಿ 2.60ಲಕ್ಷ ಖಾಲಿ ಹುದ್ದೆಗಳಿದ್ದು, ಹಾಲಿ ನೌಕರರು ಖಾಲಿ ಹುದ್ದೆಗಳ ಕಾರ್ಯಭಾರವನ್ನೂ ಸಹ ನಿರ್ವಹಿಸುತ್ತಿರುವುದರಿಂದ ನೌಕರರು ಒತ್ತಡಕ್ಕೆ ಸಿಲುಕಿ ಅನಾರೋಗ್ಯಕ್ಕೆ ತುತ್ತಾಗುತ್ತಿದ್ದು, ಅವಶ್ಯವಿರುವ ಚಿಕಿತ್ಸೆ ಪಡೆಯುವಲ್ಲಿ ಆರ್ಥಿಕ ಸಂಕಷ್ಟಕ್ಕೆ ಸಿಲುಕುತ್ತಿದ್ದಾರೆ. ಯೋಜನೆಯ ಅನುಷ್ಟಾನಾಧಿಕಾರಿಗಳು ತಾಂತ್ರಿಕ ಹಾಗೂ ಇನ್ನಿತರ ಕಾರಣಗಳನ್ನು ನೀಡಿ ಈ ಯೋಜನೆಯನ್ನು ಜಾರಿಗೊಳಿಸಲು ಅನಗತ್ಯ ವಿಳಂಬ ಮಾಡುತ್ತಿದ್ದು, ನೌಕರರಿಗೆ ಆರ್ಥಿಕ ಹೊರೆಯಾಗುತ್ತಿರುವುದರಿಂದ ಶೀಘ್ರವಾಗಿ ಈ ಯೋಜನೆಯನ್ನು ಲೋಕಾರ್ಪಣೆ ಮಾಡುವಂತೆ ಅವರು ಸರ್ಕಾರವನ್ನು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಕಾರ್ಯದರ್ಶಿ ಡಿ.ಟಿ.ಕೃಷ್ಣಮೂರ್ತಿ, ಕೋಶಾಧ್ಯಕ್ಷ ಎಸ್.ಆರ್.ನರಸಿಂಹಮೂರ್ತಿ, ಕಾರ್ಯಾಧ್ಯಕ್ಷ ಡಾ|| ಸಿ.ಎ.ಹಿರೇಮಠ್, ಗೌರವಾಧ್ಯಕ್ಷ ಆರ್.ಪಾಪಣ್ಣ, ಹಿರಿಯ ಉಪಾಧ್ಯಕ್ಷ ಕೆ.ಪ್ರಸನ್ನ ಸೇರಿದಂತೆ ಸಹಸ್ರಾರು ಸಂಖ್ಯೆಯ ಉಪಸ್ಥಿತರಿದ್ದರು. ಶಾಸಕರಿಗೆ ಮನವಿ ನೀಡಿದ ನಂತರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಅಪರ ಜಿಲ್ಲಾಧಿಕಾರಿ ಸಿದ್ಧಲಿಂಗರೆಡ್ಡಿ ಅವರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.

7ನೇ ವೇತನ ಆಯೋಗದ ವರದಿ ಅನುಷ್ಠಾನಕ್ಕೆ ಸದನದಲ್ಲಿ ಚರ್ಚಿಸಲು ಸಿದ್ಧ : ಶಾಸಕ ಎಸ್.ಎನ್.ಚನ್ನಬಸಪ್ಪ Ready to discuss implementation of 7th Pay Commission report in House: MLA SN Channabasappa
Share. Facebook Twitter LinkedIn WhatsApp Email

Related Posts

ಸರ್ಕಾರಿ ನೌಕರರ ಮೇಲೆ ಹಲ್ಲೆ ಮಾಡಿದ್ರೆ ನಿರ್ದಾಕ್ಷಿಣ್ಯವಾಗಿ ಕ್ರಮ: ಶಿವಮೊಗ್ಗ ಡಿಸಿ ಎಚ್ಚರಿಕೆ

21/08/2025 10:12 PM2 Mins Read

ಸ್ವಿಗ್ಗಿ ಡಿಲಿವರಿ ಬಾಯ್ಸ್ ಗಳಿಗೆ ಗಮನಕ್ಕೆ: ಹೆಚ್ಚಿ ಬೌನ್ಸ್ ಬಳಸಿ ಪುಡ್ ಡೆಲಿವರಿ ಮಾಡಿ, ಉಚಿತ ಇವಿ ಸ್ಕೂಟರ್ ಗೆಲ್ಲಿ

21/08/2025 9:55 PM1 Min Read

ಅತ್ಯಂತ ನಿರೀಕ್ಷಿತ ರಿಯಲ್‌ಮೀ P4 ಸರಣಿಯ ಸ್ಮಾರ್ಟ್‌ಫೋನ್‌ ಬಿಡುಗಡೆ ಮಾಡಿದ ರಿಯಲ್‌ ಮಿ

21/08/2025 9:52 PM2 Mins Read
Recent News

ಸರ್ಕಾರಿ ನೌಕರರ ಮೇಲೆ ಹಲ್ಲೆ ಮಾಡಿದ್ರೆ ನಿರ್ದಾಕ್ಷಿಣ್ಯವಾಗಿ ಕ್ರಮ: ಶಿವಮೊಗ್ಗ ಡಿಸಿ ಎಚ್ಚರಿಕೆ

21/08/2025 10:12 PM

ನಿಮ್ಮ ಮನೆಯಲ್ಲಿ ಹಳೆ ‘ಪ್ರೆಶರ್ ಕುಕ್ಕರ್’ ಇದ್ಯಾ.? ಅಯ್ಯೋ, ನಿಮ್ಮ ಹೊಟ್ಟೆಯಲ್ಲಿ ವಿಷ ಇದ್ದಂತೆ.!

21/08/2025 10:10 PM

ಸ್ವಿಗ್ಗಿ ಡಿಲಿವರಿ ಬಾಯ್ಸ್ ಗಳಿಗೆ ಗಮನಕ್ಕೆ: ಹೆಚ್ಚಿ ಬೌನ್ಸ್ ಬಳಸಿ ಪುಡ್ ಡೆಲಿವರಿ ಮಾಡಿ, ಉಚಿತ ಇವಿ ಸ್ಕೂಟರ್ ಗೆಲ್ಲಿ

21/08/2025 9:55 PM

ಅತ್ಯಂತ ನಿರೀಕ್ಷಿತ ರಿಯಲ್‌ಮೀ P4 ಸರಣಿಯ ಸ್ಮಾರ್ಟ್‌ಫೋನ್‌ ಬಿಡುಗಡೆ ಮಾಡಿದ ರಿಯಲ್‌ ಮಿ

21/08/2025 9:52 PM
State News
KARNATAKA

ಸರ್ಕಾರಿ ನೌಕರರ ಮೇಲೆ ಹಲ್ಲೆ ಮಾಡಿದ್ರೆ ನಿರ್ದಾಕ್ಷಿಣ್ಯವಾಗಿ ಕ್ರಮ: ಶಿವಮೊಗ್ಗ ಡಿಸಿ ಎಚ್ಚರಿಕೆ

By kannadanewsnow0921/08/2025 10:12 PM KARNATAKA 2 Mins Read

ಶಿವಮೊಗ್ಗ: ಸೇವಾನಿರತ ಸರ್ಕಾರಿ ಇಲಾಖೆಗಳ ಅಧಿಕಾರಿ, ಸಿಬ್ಬಂಧಿಗಳ ಮೇಲೆ ಹಲ್ಲೆ ಮಾಡುವವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಕೈಗೊಳ್ಳಲಾಗುವುದು. ಸರ್ಕಾರಿ…

ಸ್ವಿಗ್ಗಿ ಡಿಲಿವರಿ ಬಾಯ್ಸ್ ಗಳಿಗೆ ಗಮನಕ್ಕೆ: ಹೆಚ್ಚಿ ಬೌನ್ಸ್ ಬಳಸಿ ಪುಡ್ ಡೆಲಿವರಿ ಮಾಡಿ, ಉಚಿತ ಇವಿ ಸ್ಕೂಟರ್ ಗೆಲ್ಲಿ

21/08/2025 9:55 PM

ಅತ್ಯಂತ ನಿರೀಕ್ಷಿತ ರಿಯಲ್‌ಮೀ P4 ಸರಣಿಯ ಸ್ಮಾರ್ಟ್‌ಫೋನ್‌ ಬಿಡುಗಡೆ ಮಾಡಿದ ರಿಯಲ್‌ ಮಿ

21/08/2025 9:52 PM

ಧರ್ಮಸ್ಥಳದ ಅಪಪ್ರಚಾರದ ಹಿಂದೆ ಹಿಂದೂ ವಿರೋಧಿಗಳ ಪಿತೂರಿ: ಹಿಂದೂ ಪರ ಸಂಘಟನೆಗಳ ಆಕ್ರೋಶ

21/08/2025 9:47 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.