ಬೆಂಗಳೂರು: ರಾಜ್ಯದ ನೂರಾರು ಜನರು BPL ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಕೆಗೆ ಅವಕಾಶ ಮಾಡಿಕೊಡಲಾಗಿದೆ ಅಂತ ನಾಮುಂದು, ತಾಮುಂದು ಅಂತ ಸೇವಾ ಕೇಂದ್ರಗಳಲ್ಲಿ ಮುಗಿ ಬಿದ್ದಿದ್ದರು. ಆದ್ರೇ ಇವರಿಗೆ ಶಾಕಿಂಗ್ ನ್ಯೂಸ್ ಎನ್ನುವಂತೆ ಹೊಸದಾಗಿ BPL ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಿಲ್ಲ. ಆರಂಭವೂ ಆಗಿಲ್ಲ ಅಂತ ರಾಜ್ಯ ಆಹಾರ ಇಲಾಖೆ ಸ್ಪಷ್ಟ ಪಡಿಸಿದೆ.
ವಿವಿಧ ಮಾಧ್ಯಮಗಳಲ್ಲಿ ಒಂದು ವರ್ಷದ ಬಳಿಕ ಆಹಾರ ಇಲಾಖೆಯಿಂದ ಹೊಸದಾಗಿ ಬಿಪಿಎಲ್ ಕಾರ್ಡ್ ಗಳಿಗೆ ಅರ್ಜಿ ಸಲ್ಲಿಸಲು ಒಪ್ಪಿಗೆ ನೀಡಿದೆ. ಇಂದಿನಿಂದಲೇ ಬಿಪಿಎಲ್ ಕಾರ್ಡ್ ಗೆ ಅರ್ಜಿ ಸಲ್ಲಿಕೆ ಆರಂಭಗೊಳ್ಳುತ್ತಿದೆ ಅನ್ನೋ ಸುದ್ದಿಗಳು ವೈರಲ್ ಆಗಿದ್ದವು.
ಈ ಬಗ್ಗೆ ಆಹಾರ ಇಲಾಖೆಯಿಂದ ಸ್ಪಷ್ಟನೆಯ ಮಾಹಿತಿ ಬಿಡುಗಡೆ ಮಾಡಿದ್ದು, ಹೊಸದಾಗಿ ಬಿಪಿಎಲ್ ಕಾರ್ಡ್ ಗೆ ( BPL Ration Card ) ಅರ್ಜಿ ಸಲ್ಲಿಸೋದಕ್ಕೆ ಅವಕಾಶ ಮಾಡಿಕೊಟ್ಟಿಲ್ಲ. ಅರ್ಜಿ ಸಲ್ಲಿಕೆಯೂ ಆರಂಭಗೊಂಡಿಲ್ಲ ಅಂತ ಸ್ಪಷ್ಟ ಪಡಿಸಿದೆ.
ಇನ್ನೂ ಇಂದಿನಿಂದ ಕೇವಲ ಬಡ ರೋಗಿಗಳು ಚಿಕಿತ್ಸೆ ಪಡೆಯೋದಕ್ಕಾಗಿ ಬಿಪಿಎಲ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಚಿಕಿತ್ಸೆಗಾಗಿ ಬಿಪಿಎಲ್ ಕಾರ್ಡ್ ಬಯಸುವಂತವರು ಇಂದಿನಿಂದ ಬಿಪಿಎಲ್ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಬಹುದು ಅಂತ ತಿಳಿಸಿದೆ.
ಜೈಲಲ್ಲಿ ‘ನಟ ದರ್ಶನ್’ ಅದೇ ‘ಜೋಶ್’ನಲ್ಲಿ ಇದ್ದಾರೆ: ನಟ ಧನ್ವೀರ್ | Actor Darshan
BREAKING : ವಾಲ್ಮೀಕಿ ಹಗರಣ : ನಿಗಮದ ಅಧ್ಯಕ್ಷ ಬಸನಗೌಡ ದದ್ದಲ್ ಮಾಜಿ ಪಿಎ ಪಂಪಣ್ಣ ಇಡಿ ವಶಕ್ಕೆ