ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಕೋಟ್ಯಾಂತರ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ಮಾಜಿ ಸಚಿವ ಬಿ ನಾಗೇಂದ್ರ ಅವರ ಫ್ಲಾಟ್ ನಿಂದ ಇಡಿ ಅಧಿಕಾರಿಗಳು ಮತ್ತಿಬರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಹೌದು ವಾಲ್ಮೀಕಿ ನಿಗಮದ ಹಣ ಅಕ್ರಮ ವರ್ಗಾವಣೆ ಕೇಸ್ ಗೆ ಸಂಬಂಧಿಸಿದಂತೆ ನಿನ್ನೆ ಮಾಜಿ ಸಚಿವ ಬಿ ನಾಗೇಂದ್ರ ಅವರ ಆಪ್ತ ಸಹಾಯಕ ಹರೀಶ್ ಅವರನ್ನು ಬಂಧಿಸಿ ಸತತವಾಗಿ 7 ಗಂಟೆಗಳ ಕಾಲ ವಿಚಾರಣೆ ನಡೆಸಿದ್ದರು. ಅಲ್ಲದೆ ಇಂದು ಕೂಡ ಬಿ ನಾಗೇಂದ್ರ ಅವರ ಮಾಜಿ ಆಪ್ತ ಸಹಾಯಕ ಪಂಪಣ್ಣ ಅವರನ್ನು ಕೂಡ ಇಂದು ಇಡಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.
ಹಾಗಾಗಿ ಸದ್ಯ ಇಡಿ ಅಧಿಕಾರಿಗಳು ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ಮಾಜಿ ಸಚಿವ ಬಿ ನಾಗೇಂದ್ರ ಅವರ ಫ್ಲಾಟ್ ಬಳಿಯ ಇಬ್ಬರನ್ನು ಇಡಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡು ಕಚೇರಿಗೆ ಕರೆದುಕೊಂಡು ಹೋಗುತ್ತಿದ್ದಾರೆ ಎನ್ನಲಾಗಿದೆ.ಸದ್ಯಕ್ಕೆ ಈ ಒಂದು ಹಗರಣ ರಾಜ್ಯ ಕಾಂಗ್ರೆಸ್ ಪಕ್ಷಕ್ಕೆ ಕಪ್ಪು ಚುಕ್ಕೆ ಆಗಬಹುದು ಎಂದು ಜನರು ಮಾತನಾಡಿಕೊಳ್ಳುತ್ತಿದ್ದಾರೆ.