ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಹಗರಣಕ್ಕೆ ಸಂಬಂಧಿಸಿದಂತೆ ಇಂದು ಕೂಡ ಇಡಿ ಪರಿಶೀಲನೆ ಜೋರಾಗಿಯೇ ಇದೆ. ಈ ಮಧ್ಯೆ ಕೇಂದ್ರ ಗೃಹಸಚಿವ ಅಮಿತ್ ಶಾ ಅವರಿಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪತ್ರ ಬರೆದಿದ್ದು, ಭವಿಷ್ಯದಲ್ಲಿ ಇಂತಹ ಕೃತ್ಯಗಳನ್ನು ತಡೆಯಲು ಕ್ರಮವಹಿಸಬೇಕು ಮನವಿ ಮಾಡಿದ್ದಾರೆ.
ಹೌದು ವಾಲ್ಮೀಕಿ ಹಗರಣದ ಕುರಿತಂತೆ ಕೇಂದ್ರ ಅವರು ಅಮಿತ್ ಶಾ ಅವರಿಗೆ ಪತ್ರ ಬರೆದಿದ್ದು ಪತ್ರದ ಮೂಲಕ, ವಾಲ್ಮೀಕಿ ನಿಗಮದ ಹಗರಣದಲ್ಲಿ ಭಾಗಿಯಾಗಿರುವ ಹಣಕಾಸು ಸಂಸ್ಥೆಗಳಿಂದ ಸಮಗ್ರ ಮತ್ತು ಸ್ವತಂತ್ರ ತನಿಖೆ ನಡೆಸುವಂತೆ ಕೋರಿದ್ದಾರೆ. ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣವನ್ನು ಸಿಬಿಐ ತನಿಖೆ ತೀವ್ರಗೊಳ್ಳಬೇಕು. ಪ್ರಕರಣದಲ್ಲಿ ಯೂನಿಯನ್ ಬ್ಯಾಂಕ್ ಶಾಮೀಲಾಗಿದೆ. ಹೀಗಾಗಿ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಹೇಳಿದ್ದಾರೆ.
ಸಮಗ್ರ ತನಿಖೆ ಮಾಡಿಸಿ ಹಗರಣದಲ್ಲಿ ಭಾಗಿಯಾದವನ್ನು ಹೊಣೆಗಾರರನ್ನಾಗಿ ಮಾಡಬೇಕು. ಪ್ರಕರಣದಲ್ಲಿ ಭಾಗಿಯಾಗಿರುವ ಯೂನಿಯನ್ ಬ್ಯಾಂಕ್ ಮತ್ತು ಇತರೆ ಹಣಕಾಸು ಸಂಸ್ಥೆಗಳ ಪಾತ್ರದ ತನಿಖೆಯಾಗಬೇಕು. ಆ ಮೂಲಕ ಚಂದ್ರಶೇಖರ್ ಆತ್ಮಹತ್ಯೆಗೆ ಕಾರಣ ಪತ್ತೆಹಚ್ಚಬೇಕು. ಭವಿಷ್ಯದಲ್ಲಿ ಇಂತಹ ಕೃತ್ಯಗಳನ್ನು ತಡೆಯಲು ಕ್ರಮವಹಿಸಬೇಕು ಎಂದು ಪತ್ರದ ಮೂಲಕ ಮನವಿ ಮಾಡಿದ್ದಾರೆ.