ಬೆಂಗಳೂರು: ಕೋವಿಡ್ -19 ಸಾಂಕ್ರಾಮಿಕ ರೋಗವು ಕರ್ನಾಟಕದ ಆರೋಗ್ಯ ಮೂಲಸೌಕರ್ಯವನ್ನು ಹಾನಿಗೊಳಿಸಿದ್ದು, ಕೆಲವು ಅಡ್ಡಪರಿಣಾಮಗಳಿಗೆ ಕಾರಣವಾಯಿತು, ಅವುಗಳಲ್ಲಿ ಪ್ರಮುಖವಾದುದು ಬಾಲ್ಯ ವಿವಾಹಗಳ ಸಂಖ್ಯೆಯಲ್ಲಿನ ಹೆಚ್ಚಳ.
ಕಳೆದ ಮೂರು ವರ್ಷಗಳಲ್ಲಿ ದೇಶಾದ್ಯಂತ ಸಾವಿರಾರು ಬಾಲ್ಯವಿವಾಹಗಳು ನಡೆದಿದ್ದು, ಅತಿ ಹೆಚ್ಚು ಬಾಲ್ಯವಿವಾಹಗಳು ನಡೆದ ರಾಜ್ಯಗಳ ಪಟ್ಟಿಯಲ್ಲಿ ತಮಿಳುನಾಡು ಮೊದಲ ಸ್ಥಾನದಲ್ಲಿದ್ದರೆ, ಕರ್ನಾಟಕ ಎರಡನೇ ಸ್ಥಾನದಲ್ಲಿದೆ ಎಂದು ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್ ಗೆ ನೀಡಿರುವ ಮಾಹಿತಿಯಲ್ಲಿ ಬಹಿರಂಗಗೊಂಡಿದೆ.
ಸುಪ್ರೀಂಕೋರ್ಟ್ ಗೆ ಕೇಂದ್ರ ಸರ್ಕಾರ ನೀಡಿರುವ ಮಾಹಿತಿ ಪ್ರಕಾರ ತಮಿಳುನಾಡಿನಲ್ಲಿ ಒಟ್ಟು 8,966 ಬಾಲ್ಯವಿವಾಹಗಳು ಆಗುವ ಮೂಲಕ ಮೊದಲ ಸ್ಥಾನದಲ್ಲಿದ್ದರೆ, ಕರ್ನಾಟಕದಲ್ಲಿ 8,348 ಎರಡನೇ ಸ್ಥಾನದಲ್ಲಿದೆ. ಪಶ್ಚಿಮ ಬಂಗಾಳದಲ್ಲಿ 8,324,, ತೆಲಂಗಾಣದಲ್ಲಿ 4,440, ಆಂಧ್ರಪ್ರದೇಶದಲ್ಲಿ 3,416 ಬಾಲ್ಯವಿವಾಹಗಳು ನಡೆದಿವೆ ಎಂದು ಮಾಹಿತಿ ನೀಡಿದೆ.