ಕಠ್ಮಂಡು: ಮಧ್ಯ ನೇಪಾಳದ ಮದನ್-ಆಶ್ರಿತ್ ಹೆದ್ದಾರಿಯಲ್ಲಿ ಇಂದು ಬೆಳಿಗ್ಗೆ ಭಾರಿ ಭೂಕುಸಿತ ಸಂಭವಿಸಿದ್ದು, ಅಂದಾಜು 63 ಪ್ರಯಾಣಿಕರನ್ನು ಹೊತ್ತ ಎರಡು ಬಸ್ಸುಗಳು ತ್ರಿಶೂಲಿ ನದಿಗೆ ಉರುಳಿ ಬಿದ್ದಿವೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಎರಡೂ ಬಸ್ಸುಗಳಲ್ಲಿ ಬಸ್ ಚಾಲಕರು ಸೇರಿದಂತೆ ಒಟ್ಟು 63 ಜನರು ಇದ್ದರು.
”ಮುಂಜಾನೆ ೩:೩೦ ರ ಸುಮಾರಿಗೆ ಭೂಕುಸಿತವು ಬಸ್ಸುಗಳನ್ನು ಕೊಚ್ಚಿಕೊಂಡು ಹೋಯಿತು. ನಾವು ಘಟನಾ ಸ್ಥಳದಲ್ಲಿರುತ್ತೇವೆ ಮತ್ತು ಶೋಧ ಕಾರ್ಯಾಚರಣೆ ನಡೆಯುತ್ತಿದೆ. ಕಾಣೆಯಾದ ಬಸ್ಸುಗಳನ್ನು ಹುಡುಕುವ ನಮ್ಮ ಪ್ರಯತ್ನಗಳಿಗೆ ನಿರಂತರ ಮಳೆ ಅಡ್ಡಿಯಾಗಿದೆ” ಎಂದು ಚಿಟ್ವಾನ್ನ ಮುಖ್ಯ ಜಿಲ್ಲಾ ಅಧಿಕಾರಿ ಇಂದ್ರದೇವ್ ಯಾದವ್ ಎಎನ್ಐಗೆ ಖಚಿತಪಡಿಸಿದ್ದಾರೆ