ರಾಯಚೂರು : ಹಟ್ಟಿ ಚಿನ್ನದ ಗಣಿಯಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ಮಣ್ಣು ಕುಸಿದು ಓರ್ವ ಕಾರ್ಮಿಕ ಸಾವನ್ನಪ್ಪಿರುವ ಘಟನೆ ನಡೆದಿದೆ.
ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಹಟ್ಟಿ ಪಟ್ಟಣದ ಚಿನ್ನದ ಗಣಿಯಲ್ಲಿ ಮಣ್ಣು ಕುಸಿದ ಪರಿಣಾಮ ಓರ್ವ ಕಾರ್ಮಿಕ ಸಾವನ್ನಪ್ಪಿದ್ದು, ಕಾರ್ಮಿಕನನ್ನು ಮೌನೇಶ್ ಎಂದು ಗುರುತಿಸಲಾಗಿದೆ.
ಘಟನೆಯಲ್ಲಿ ಮೂವರು ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದು, ಗಾಯಗೊಂಡ ಕಾರ್ಮಿಕರನ್ನು ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.