ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ.ನಾಗೇಂದ್ರರನ್ನು ಇಡಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದು, ವಾಲ್ಮೀಕಿ ಹಗರಣದ ಬಗ್ಗೆ ನನಗೇನೂ ಗೊತ್ತಿಲ್ಲ ಎಂದು ಹೇಳಿದ್ದಾರೆ.
ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಕೋಟ್ಯಾಂತರ ಅಕ್ರಮ ಹಣ ವರ್ಗಾವಣೆ ಪ್ರಕರಣಕೆಕ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ಈ ವೇಳೆ ಅವರು ಮಾಧ್ಯಮಗಳಿಗೆ ವಾಲ್ಮೀಕಿ ಹಗರಣದ ಬಗ್ಗೆ ನನಗೇನು ಗೊತ್ತಿಲ್ಲ. ಮನೆಯಲ್ಲಿ ಇಡಿ ಅಧಿಕಾರಿಗಳು ವಿಚಾರಣೆ ಮಾಡಿದ್ರು ಇಂದು ಇಲ್ಲಿಗೆ ಕರೆದುಕೊಂಡು ಬಂದಿದ್ದಾರೆ ಎಂದು ತಿಳಿಸಿದ್ದಾರೆ.
ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಕೋಟ್ಯಾಂತರ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ ನಾಗೇಂದ್ರ ಅವರನ್ನು ಇಡಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದು, ಹೆಚ್ಚಿನ ವಿಚಾರಣೆ ನಡೆಸಲಿದ್ದಾರೆ.
ವಾಲ್ಮೀಕಿ ಅಭಿವೃದ್ಧಿ ನಿಗಮದ ಅವ್ಯವಹಾರ ಪ್ರಕರಣ ಸಂಬಂಧ ಇಡಿ ಅಧಿಕಾರಿಗಳು ಮಾಜಿ ಸಚಿವ ಬಿ.ನಾಗೇಂದ್ರ ಅವರ ನಿವಾಸ, ಆಪ್ತರ ಮನೆಗಳ ಮೇಲೆ ನಿನ್ನೆ ದಾಳಿ ನಡೆಸಿದ್ದಾರೆ. ನಾಗೇಂದ್ರ ಅವರ ಮನೆಯಲ್ಲಿ ಆಸ್ತಿ ಪತ್ರಗಳು ದೊರೆತಿದ್ದು, ಅವುಗಳನ್ನು ಹಗರಣದಲ್ಲಿ ಬಂದ ಹಣದಿಂದಲೇ ಖರೀದಿಸಲಾಗಿದ್ಯಾ ಅನ್ನೋ ಬಗ್ಗೆ ತನಿಖೆಯನ್ನು ಇಡಿ ಅಧಿಕಾರಿಗಳು ನಡೆಸುತ್ತಿದ್ದಾರೆ.