ಮೈಸೂರು : ಸದ್ಯ ರಾಜ್ಯದಲ್ಲಿ ದಿನದಿಂದ ದಿನಕ್ಕೆ ಹಗರಣಗಳ ಸರಮಾಲೆಗಳೇ ಹುಟ್ಟಿಕೊಳ್ಳುತ್ತಿವೆ. ವಾಲ್ಮೀಕಿ ಹಗರಣ, ಮುಡಾ ಹಗರಣ ಬಳಿಕ ಇದೀಗ ಮತ್ತೊಂದು ಹಗರಣಾದ ಆರೋಪದ ಅಡಿಯಲ್ಲಿ ಮಾಜಿ ಸಚಿವರೊಬ್ಬರನ್ನು ಸಿಐಡಿ ಅಧಿಕಾರಿಗಳು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.
ಹೌದು ಮೈಸೂರಿನ ದೇವರಾಜ ಅರಸು ಟ್ರಕ್ ಟರ್ಮಿನಲ್ ಪ್ರೈವೇಟ್ ಲಿಮಿಟೆಡ್ ನಲ್ಲಿ ಕೋಟ್ಯಾಂತರ ರೂಪಾಯಿ ಹಗರಣಕ್ಕೆ ಸಂಬಂಧಿಸಿದಂತೆ ಇದೀಗ ಮಾಜಿ ಸಚಿವ ಡಿ ಎಸ್ ವಿರಯ ಅವರನ್ನು CID ಅಧಿಕಾರಿಗಳು ಬಂಧಿಸಿದ್ದಾರೆ.
ಅವರು ಅಧ್ಯಕ್ಷರಾಗಿದ್ದ ಕಾಲದಲ್ಲಿ ಸುಮಾರು 47 ಕೋಟಿ ರೂಪಾಯಿ ಹಗರಣ ನಡೆದಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಇದೀಗ ಸಿಐಡಿ ಅಧಿಕಾರಿಗಳು ಮಾಜಿ ಸಚಿವ ಡಿಎಸ್ ವೀರಯ್ಯರನ್ನ ಬಂಧಿಸಿದ್ದಾರೆ. ವಾಲ್ಮೀಕಿ ಹಗರಣ ಹಾಗೂ ಮುಡಾ ಹಗರಣ ಬಳಿಕ ಮತ್ತೊಂದು ಹಗರಣ ಬೆಳಕಿಗೆ ಬಂದಿದೆ.