ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಿಗಮದ ಅಧ್ಯಕ್ಷ ಬಸನಗೌಡ ದದ್ದಲ್ಗೆ ಎಸ್ಐಟಿ ಮತ್ತೆ ನೋಟಿಸ್ ನೀಡಿದೆ.
ಹೌದು ವಾಲ್ಮೀಕಿ ಹಗರಣದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ಅಧಿಕಾರಿಗಳು ಈಗಾಗಲೇ ನಿಗಮದ ಅಧ್ಯಕ್ಷ ಬಸನಗೌಡ ದದ್ದಲ್ಲ ಗೆ ಮೂರು ಬಾರಿ ನೋಟಿಸ್ ನೀಡಿದ್ದರು.ಇಂದು ದದ್ದಲ್ ವಿಚಾರಣೆಗೆ ಹಾಜರಾಗಿದ್ದರು. ಆದರೆ ಇದೀಗ ಮತ್ತೆ ಎಸ್ಐಟಿ ಅಧಿಕಾರಿಗಳು ಸೋಮವಾರ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದಾರೆ ಎನ್ನಲಾಗಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮಾಜಿ ಸಚಿವ ಬಿ ನಾಗೇಂದ್ರ ಅವರನ್ನು ಇಡಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದರು. ಸತತ ಎಂಟು ಗಂಟೆಗಳ ನಂತರ ನಾಗೇಂದ್ರ ಅವರನ್ನು ಇಡಿ ಅಧಿಕಾರಿಗಳು ಬಂದಿಸಿದ್ದಾರೆ ಎಂದು ಬಲಮೂಲಗಳಿಂದ ತಿಳಿದು ಬಂದಿದೆ. ಈಗಾಗಲೇ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವರನ್ನು ವಶಕ್ಕೆ ಪಡೆದು ಇಡಿ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ.