ಬೆಂಗಳೂರು : ಸದ್ಯ ರಾಜ್ಯದಲ್ಲಿ ಮುಡಾ ಪ್ರಕರಣ ದಿನದಿಂದ ದಿನಕ್ಕೆ ಭಾರಿ ಸದ್ದು ಮಾಡುತ್ತಿದ್ದು, ಹಗರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಮೈಸೂರಲ್ಲಿ ಇಂದು ಬಿಜೆಪಿ ಪ್ರತಿಭಟನೆ ಮಾಡಿತ್ತು.ಬಿಜೆಪಿ ನಾಯಕರ ಬಂಧನಕ್ಕೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಿಡಿಕಾರಿದ್ದು, ಮುಡಾ ಪ್ರಕರಣದಲ್ಲಿ ನೀವೇ ಅರೆಸ್ಟ್ ಆಗಬಹುದು ಎಂದು ಸಿಎಂ ಸಿದ್ದರಾಮಯ್ಯಗೆ ಎಚ್ಚರಿಕೆ ನೀಡಿದ್ದಾರೆ.
ಸಿದ್ದರಾಮಯ್ಯನವರೇ ನೀವು ನಮ್ಮನ್ನು ಬಂಧಿಸುತ್ತೀರಾ? ಮುಡಾ ಪ್ರಕರಣದಲ್ಲಿ ನೀವೇ ಅರೆಸ್ಟ್ ಆಗಬಹುದು. ಅಗತ್ಯ ಬಿದ್ದರೆ ಈ ಪ್ರಕರಣದಲ್ಲಿ ನಾವು ಕಾನೂನು ಹೋರಾಟಕ್ಕೂ ಮುಂದಾಗುತ್ತೇವೆ. ಮುಡಾ ಹಗರಣದಲ್ಲಿ ಸಿದ್ದರಾಮಯ್ಯ ಸೈಟ್ ಧರ್ಮಪತ್ನಿ ಹೆಸರಲ್ಲಿದೆ ಅಂತಾರೆ. ನೀವು ಅಧಿಕಾರಕ್ಕೆ ಬಂದ ಕೂಡಲೇ ಇದನ್ನು ಗಮನಿಸಿ ವಾಪಸ್ ಕೊಡಬೇಕಿತ್ತು.
ಈಗ 50:50 ಅನುಪಾತವೇ ಇಲ್ಲ. ನಿಮಗೆ ಜಮೀನು ಕೊಟ್ಟವನ ಅಸ್ತಿತ್ವವೇ ಯಕ್ಷ ಪ್ರಶ್ನೆಯಾಗಿದೆ. ಕೂಡಲೇ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು.1985ರಲ್ಲಿ ಇಂದಿರಾಗಾಂಧಿ ಸರ್ವಾಧಿಕಾರಿಯಾಗಿದ್ದರು. 2023-24ರಲ್ಲಿ ಸಿದ್ದರಾಮಯ್ಯ ಸರ್ವಾಧಿಕಾರಿ ಆಗಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
ನಮಗೆ ಹೋರಾಟ ಮಾಡಲು ಹಕ್ಕು ಇಲ್ವಾ? ಕಾಂಗ್ರೆಸ್ ಪಕ್ಷದ ಹೈಕಮಾಂಡ್ಗೆ ಕಮಾಂಡ್ ಇದ್ದರೆ, ಸಿಎಂ ಸಿದ್ದರಾಮಯ್ಯನವರ ರಾಜೀನಾಮೆಯನ್ನು ಪಡೆಯಿರಿ ಎಂದು ಹೇಳಿರುವ ಜೋಶಿ, ಸಿದ್ದರಾಮಯ್ಯರೇ ಇಂದಿರಾ ಗಾಂಧಿ ಸಹ ಹೀಗೇ ಇದ್ದರು. ನನ್ನನ್ನು ತಡೆಯುವವರು ಯಾರೂ ಇಲ್ಲವೆಂದು ಭಾವಿಸಿದ್ದರು ಎಂದು ಕಿರಿಕಾಡಿದರು.