ಬೆಂಗಳೂರು : ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತ್ತೊಂದು ಬರ್ಬರ ಹತ್ಯೆಯಾಗಿದ್ದು, ಕಾರು ಅಪಘಾತ ಮಾಡಿ ಮಾರಕಾಸ್ತ್ರದಿಂದ ಯುವಕನನ್ನು ಕೊಲೆ ಮಾಡಿರುವ ಘಟನೆ ನಡೆದಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಗಂಗಾಪುರ ಬಳಿ ಯುವಕನ ಕಾರು ಅಪಘಾತ ಮಾಡಿ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಲೆ ಮಾಡಿರುವ ಘಟನೆ ನಡೆದಿದೆ.
ಕೋಲಾರದಿಂದ ಹೊಸಕೋಟೆ ಕಡೆಗೆ ಕಾರಿನಲ್ಲಿ ಬರುತ್ತಿದ್ದ ಕೋಲಾರ ಮೂಲದ ಭಾರ್ಗವ್ (೨೪) ಎಂಬಾತನನ್ನು ದುಷ್ಕರ್ಮಿಗಳು ಕೊಲೆ ಮಾಡಿದ್ದಾರೆ. ಕಾರಿನಲ್ಲಿ ಬರುತ್ತಿದ್ದ ಭಾರ್ಗವ್ ನನ್ನು ಚೇಸ್ ಮಾಡಿ ಬ್ರೇಕ್ ಹಾಕಿ ಭಾರ್ಗವ್ ಕಾರು ಡಿಕ್ಕಿಯಾಗುವಂತೆ ಮಾಡಿದ ಆರೋಪಿಗಳು ಇದೇ ನೆಪವೊಡ್ಡಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ. ಕೊಲೆ ಮಾಡಿ ಆರೋಪಿಗಳು ಎಸ್ಕೇಪ್ ಆಗಿದ್ದು, ನಂದಗುಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.