ಬೆಂಗಳೂರು : ವಾಲ್ಮೀಕಿ ನಿಗಮದಲ್ಲಿ ಕೋಟ್ಯಾಂತರ ರೂಪಾಯಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಮಾಜಿ ಸಚಿವ ಬಿ ನಾಗೇಂದ್ರ ಅವರನ್ನು ಇಡಿ ಅಧಿಕಾರಿಗಳು ಬಂಧಿಸಿದ್ದಾರೆ.
ಈಗ ಈ ಒಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮಾಜಿ ಸಚಿವ ಶ್ರೀರಾಮುಲು ಅವರಿಗೆ ಸಂಕಷ್ಟ ಎದುರಾಗಿದ್ದು ಬಿಜೆಪಿ ಅಧಿಕಾರದಲ್ಲಿದ್ದಾಗ ಅವರು ಸಚಿವರಾಗಿದ್ದ ವೇಳೆ ಅಕ್ರಮ ನಡೆದಿತ್ತು ಎಂಬ ಆರೋಪ ಕೇಳಿ ಬಂದಿದೆ. ಹಾಗಾಗಿ ಎಸ್ಐಟಿ ಅಧಿಕಾರಿಗಳು ಮಾಜಿ ಸಚಿವ ಶ್ರೀರಾಮುಲುಗೆ ನೋಟಿಸ್ ನೀಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಇಡಿ ಅಧಿಕಾರಿಗಳು ಹಲವರನ್ನು ವಶಕ್ಕೆ ಪಡೆದುಕೊಂಡು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ ಅದರ ಬೆನ್ನಲ್ಲೇ ಎಸ್ ಐ ಟಿ ಅಧಿಕಾರಿಗಳು ಕೂಡ ತನಿಖೆಯನ್ನು ಚುರುಕುಗೊಳಿಸಿದ್ದು ಮಾಜಿ ಸಚಿವ ಶ್ರೀರಾಮುಲುಗೆ ವಿಚಾರಣೆಗೆ ಹಾಜರಾಗುವಂತೆ ಸದ್ಯದಲ್ಲೇ ನೋಟಿಸ್ ನೀಡುವ ಸಾಧ್ಯತೆ ಇದೆ ಎಂದು ಬಲ್ಲಮೂಲಗಳಿಂದ ತಿಳಿದು ಬಂದಿದೆ.