ಬೆಂಗಳೂರು : ರಾಜ್ಯಾದ್ಯಂತ ಮುಂಗಾರು ಮಳೆಯ ಆರ್ಭಟ ಜೋರಾಗಿದ್ದು, ಐದು ದಿನ ಕರಾವಳಿ ಮತ್ತು ಮಲೆನಾಡಿನ ಐದು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಈಗಾಗಲೇ ದಕ್ಷಿಣ ಕರ್ನಾಟಕದ ಉತ್ತರ ಕನ್ನಡ ದಕ್ಷಿಣ ಕನ್ನಡ ಮಂಗಳೂರು ಉಡುಪಿ ಸೇರಿಯಂತೆ ಹಲವಡೆ ಮಳೆಯ ಅವಾಂತರ ಸೃಷ್ಟಿಯಾಗಿದ್ದು, ಜನಜೀವನ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿದೆ.ಇಂದು ಸೇರಿದಂತೆ ಐದು ದಿನ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಹೈಅಲರ್ಟ್ ಮುಂದುವರೆಸಲಾಗಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಭಾರೀ ಮಳೆಯಾಲಿದೆ. ಗಾಳಿಯ ವೇಗ ಪ್ರತಿ ಗಂಟೆಗೆ 40 ರಿಂದ 50 ಕಿಮೀ ತಲುಪುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ನಿರಂತರ ಗಾಳಿಯೊಂದಿಗೆ ಭಾರೀ ಮಳೆಯಾಗಲಿದೆ.
ಉತ್ತರ ಒಳನಾಡಿನ ಬೆಳಗಾವಿ, ಕಲಬುರಗಿ, ಬೀದರ್ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದ್ದು, ಗಾಳಿಯೂ ಇರಲಿದೆ. ದಕ್ಷಿಣ ಒಳನಾಡಿನ ಹಾಸನ ಮತ್ತು ಚಾಮರಾಜನಗರ ಜಿಲ್ಲೆಯಲ್ಲೂ ಮಳೆ ಇರಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.