ಶಿವಮೊಗ್ಗ : ಮುಖ್ಯಮಂತ್ರಿಗಳಿಗೆ ನೀಡಿದ್ದ ಆನೆ ಪತ್ರಗಳು ಕಸದ ಬುಟ್ಟಿಗೆ ಸೇರಿಕೊಂಡಿವೆ. ರಾಜ ಕಾಂಗ್ರೆಸ್ ಸರ್ಕಾರ ಯಾವಾಗ ಬೀಳುತ್ತದೆ ಗೊತ್ತಿಲ್ಲ ಎಂದು ಶಿವಮೊಗ್ಗದಲ್ಲಿ ಬಿಜೆಪಿ ಸಂಸದ ಬಿ ವೈ ರಾಘವೇಂದ್ರ ಸ್ಪೋಟಕವಾದ ಭವಿಷ್ಯ ನುಡಿದಿದ್ದಾರೆ.
ಇಂದು ಶಿವಮೊಗ್ಗದ ಬಂಟರ ಭವನದಲ್ಲಿ ಜಿಲ್ಲಾ ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯ ಕಾಂಗ್ರೆಸ್ ಸರ್ಕಾರ ಯಾವಾಗ ಬೀಳುತ್ತೋ ಗೊತ್ತಿಲ್ಲ. ಈ ಸರ್ಕಾರ ಐದು ವರ್ಷ ಪೂರ್ಣಗೊಳಿಸುವುದು ಅನುಮಾನ ಇದೆ. ಕಾಂಗ್ರೆಸ್ ಸರ್ಕಾರ ಸೇಡಿನ ರಾಜಕಾರಣ ಮಾಡುತ್ತಿದೆ. ಜಿಲ್ಲೆಯ ಅಭಿವೃದ್ಧಿಗೆ ಒಂದು ರೂಪಾಯಿ ಸಹ ಸರ್ಕಾರ ಇದುವರೆಗೂ ನೀಡಿಲ್ಲ. ಕಾಂಗ್ರೆಸ್ ನಾಯಕರಿಗೆ ಅಧಿಕಾರದ ಮದ ಬಂದಿದೆ ಎಂದು ವಾಗ್ದಾಳಿ ನಡೆಸಿದರು.
ಚಾಮರಾಜನಗರದಲ್ಲಿ ಮನವಿ ಪತ್ರಗಳನ್ನ ಕಸದ ಬುಟ್ಟಿಗೆ ಹಾಕಿದ್ದಾರೆ.ಮುಖ್ಯಮಂತ್ರಿ ಗೆ ನೀಡಿದ ಮನವಿ ಪತ್ರಗಳು ಕಸದ ಬುಟ್ಟಿಗೆ ಸೇರಿಕೊಂಡಿವೆ.ಕಾಂಗ್ರೆಸ್ ನಾಯಕರಿಗೆ ಜನರ ಬಗ್ಗೆ ಕಾಳಜಿ ಇಲ್ಲ ಸಹಕಾರಿ ಕ್ಷೇತ್ರದ ಸಂಘಟನೆಗೆ ಕಾರ್ಯಕರ್ತರು ಆದ್ಯತೆ ಕೊಡಬೇಕು. ಡಿಸಿಸಿ ಬ್ಯಾಂಕುಗಳನ್ನು ಬೇರೆ ಪಕ್ಷದವರು ಅಧಿಕಾರ ಹಿಡಿದಿದ್ದಾರೆ ಎಂದು ಶಿವಮೊಗ್ಗ ನಗರದಲ್ಲಿ ಸಂಸದ ಬಿ ವೈ ರಾಘವೇಂದ್ರ ಹೇಳಿಕೆ ನೀಡಿದರು.