ಬೆಂಗಳೂರು : ಬೆಂಗಳೂರಿನಲ್ಲಿ ಹಿಟ್ ಅಂಡ್ ರನ್ ಕೇಸಿಂದ ಸಾವುಗಳ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹಚ್ಚುತ್ತಿದ್ದು, ಪೊಲೀಸರು ಎಷ್ಟೇ ಮುಂಜಾಗೃತ ಕ್ರಮ ಕೈಗೊಂಡರು ಇಂತಹ ಘಟನೆಗಳು ನಡೆಯುತ್ತಲೇ ಇರುತ್ತವೆ. ಇದೀಗ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿ ಹಿಟ್ ಅಂಡ್ ರನ್ ಗೆ ಯುವಕರಿಬ್ಬರೂ ಬಲಿಯಾಗಿರುವ ಘಟನೆ ನಡೆದಿದೆ.
ಹೌದು ಬೆಂಗಳೂರು ಗ್ರಾ. ಜಿಲ್ಲೆಯ ಹೊಸಕೋಟೆ ಹೊರವಲಯಲ್ಲಿ ಹಿಟ್ & ರನ್ಗೆ ಇಬ್ಬರು ಬಲಿಯಾಗಿದ್ದಾರೆ ಬೆಂಗಳೂರಿನ ಕೆಂಪಾಪುರದ ಸಿದ್ಧಾರ್ಥ್(17), ಹರ್ಷ(18) ಮೃತರು. ಬರ್ತ್ಡೇ ಆಚರಣೆ ಮಾಡಲು ಇಬ್ಬರು ಯುವಕರು ಕಾರಿನಲ್ಲಿ ಲಾಂಗ್ಡ್ರೈವ್ ಬಂದಿದ್ದರು.
ಈ ವೇಳೆ ಹೆದ್ದಾರಿಯಲ್ಲಿ ಕಾರಿಗೆ ಅಪರಿಚತ ವಾಹನ ಡಿಕ್ಕಿ ಹೊಡೆದಿದೆ. ಅಪರಿಚಿತ ವಾಹನ ಡಿಕ್ಕಿಯಾದ ರಭಸಕ್ಕೆ ಕಾರು ಸಂಪೂರ್ಣ ಜಖಂ ಆಗಿದೆ. ಹಿಟ್ ಅಂಡ್ ರನ್ ಮಾಡಿ ಹೋದ ವಾಹನಕ್ಕಾಗಿ ಪೊಲೀಸರು ಹುಡುಕಾಡುತ್ತಿದ್ದಾರೆ. ಸೂಲಿಬೆಲೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.