ಮಂಗಳೂರು : ಶಾರ್ಟ್ ಸರ್ಕ್ಯೂಟ್ ನಿಂದ ಫಿಶ್ ಮಿಲ್ ನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು ಮಿಲ್ ನಲ್ಲಿದ್ದ ಲಕ್ಷಾಂತರ ವಸ್ತುಗಳು ಬೆಂಕಿಗೆ ಆಹುತಿಯಾಗಿರುವ ಘಟನೆ ಮಂಗಳೂರಿನ ಸೂರತ್ಕಲ್ ನಲ್ಲಿ ನಡೆದಿದೆ.
ಹೌದು ಮಂಗಳೂರಿನ ಸೂರತ್ಕಲ್ ನಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಫಿಶ್ ಮಿಲ್ ನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಮೀನು ಸಂಸ್ಕರಣ ಘಟಕದಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಕಾಣಿಸಿಕೊಂಡಿದೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ಆಗಮಿಸಿ ಕೂಡಲೇ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದೆ.
ಆದರೆ ಘಟನೆಯಲ್ಲಿ ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ತಿಳಿದುಬಂದಿದ್ದು, ಫಿಶ್ ಮಿಲ್ ನಲ್ಲಿ ಇದ್ದಂತಹ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಬೆಂಕಿಗೆ ಆಹುತಿಯಾಗಿವೆ ಘಟನ ಸ್ಥಳಕ್ಕೆ ಇದೀಗ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.