ಬೆಂಗಳೂರು: ರಾಜ್ಯದಲ್ಲಿ ಡೆಂಗ್ಯೂ ಆರ್ಭಟ ಮುಂದುವರೆದಿದೆ. ಕಳೆದ 24 ಗಂಟೆಯಲ್ಲಿ 445 ಜನರಿಗೆ ರಾಜ್ಯಾಧ್ಯಂತ ಡೆಂಗ್ಯೂ ಪಾಸಿಟಿವ್ ಅಂತ ತಿಳಿದು ಬಂದಿದೆ. ಹೀಗಾಗಿ ಸಕ್ರೀಯ ಪ್ರಕರಣಗಳ ಸಂಖ್ಯೆ 9,527ಕ್ಕೆ ಏರಿಕೆಯಾಗಿದೆ.
ಈ ಕುರಿತಂತೆ ರಾಜ್ಯ ಆರೋಗ್ಯ ಇಲಾಖೆಯಿಂದ ಮಾಹಿತಿ ಹಂಚಿಕೊಂಡಿದ್ದು, ಕಳೆದ 24 ಗಂಟೆಯಲ್ಲಿ 2630 ಜನರನ್ನು ಡೆಂಗ್ಯೂ ಪತ್ತೆ ಪರೀಕ್ಷೆಗೆ ಒಳಪಡಿಸಲಾಗಿದೆ. ಇವರಲ್ಲಿ 445 ಮಂದಿಗೆ ಡೆಂಗ್ಯೂ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ ಅಂತ ತಿಳಿಸಿದೆ.
ಬಿಬಿಎಂಪಿ ವ್ಯಾಪ್ತಿಯಲ್ಲಿ 294, ತುಮಕೂರು 19, ಧಾರವಾಡ 12, ಬೀದರ್ 72, ಬಳ್ಳಾರಿ 3, ಮಂಡ್ಯ 33, ದಕ್ಷಿಣ ಕನ್ನಡ 62, ಉಡುಪಿ 5 ಹಾಗೂ ಚಿಕ್ಕಮಗಳೂರು 13 ಸೇರಿದಂತೆ 445 ಜನರಿಗೆ ಡೆಂಗ್ಯೂ ಪಾಸಿಟಿವ್ ಅಂತ ಪರೀಕ್ಷೆಯಿಂದ ತಿಳಿದು ಬಂದಿದೆ.