ಉತ್ತರ ಕನ್ನಡ: ನಾಳೆ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಈ ಹಿನ್ನಲೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಕೆಲ ತಾಲ್ಲೂಕಿನ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಈ ಕುರಿತಂತೆ ಉತ್ತರ ಕನ್ನಡ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಅವರು ಆದೇಶ ಹೊರಡಿಸಿದ್ದು, ನಾಳೆ ಭಾರೀ ಮಳೆ ಜಿಲ್ಲೆಯಾಧ್ಯಂತ ಆಗಲಿದೆ ಅಂತ ಮುನ್ಸೂಚನೆ ನೀಡಿದೆ. ಅಲ್ಲದೇ ರೆಡ್ ಅಲರ್ಟ್ ಕೂಡ ಘೋಷಣೆ ಮಾಡಿದೆ. ಈ ಹಿನ್ನಲೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ, ಹೊನ್ನಾವರ, ಕುಮಟಾ, ಅಂಕೋಲಾ, ಕಾರವಾರ, ಶಿರಸಿ, ಸಿದ್ಧಾಪುರ, ಜೋಯಿಡಾ ತಾಲ್ಲೂಕಿನ ಶಾಲಾ-ಕಾಲೇಜುಗಳಿಗೆ ರಜೆಯನ್ನು ಘೋಷಣೆ ಮಾಡಲಾಗಿದೆ ಅಂತ ತಿಳಿಸಿದ್ದಾರೆ.
ಅಂದಹಾಗೇ ಹವಾಮಾನ ಇಲಾಖೆಯಿಂದ ಮುಂದಿನ 4 ದಿನಗಳವರೆಗೂ ಭಾರೀ ಮಳೆಯಾಗಲಿದೆ ಅಂತ ಮುನ್ಸೂಚನೆ ನೀಡಿದೆ. ಜೊತೆಗೆ ರೆಡ್ ಅಲರ್ಟ್ ಕೂಡ ಘೋಷಣೆ ಮಾಡಿದೆ. ಈಗಾಗಲೇ ಒಂದು ವಾರಗಳಿಂದ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ಜಿಲ್ಲೆಯ ಜನ ಜೀವನ ಅಸ್ತವ್ಯಸ್ಥಗೊಂಡಿದೆ. ಇದರ ನಡುವೆ ಮತ್ತೆ ನಾಲ್ಕು ದಿನ ಭಾರೀ ಮಳೆ ಉತ್ತರ ಕನ್ನಡ ಜಿಲ್ಲೆ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಆಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ಅನಂತ್ ಅಂಬಾನಿ ಮದುವೆಗೆ ಅನುಮತಿಯಿಲ್ಲದೇ ಪ್ರವೇಶ: ಇಬ್ಬರು ಯೂಟ್ಯೂಬರ್ ಪೊಲೀಸರು ವಶಕ್ಕೆ | Anant Ambani Wedding