ಬೆಂಗಳೂರು : ಇಂದಿನಿಂದ ವಿಧಾನಮಂಡಲ ಅಧಿವೇಶನ ನಡೆಯಲಿದ್ದು, ವಿಧಾನಸೌಧಕ್ಕೆ ಅಗಮಿಸಿದ ಸಿಎಂ ಸಿದ್ದರಾಮಯ್ಯ ಪ್ರತಿಭಟನೆಯ ಬಿಸಿ ತಟ್ಟಿದೆ.
ವಾಲ್ಮೀಕಿ, ಮುಡಾ ಹಗರಣ ಖಂಡಿಸಿ ಇಂದು ಬಿಜೆಪಿ ಪ್ರತಿಭಟನೆ ನಡೆಸುತ್ತಿದ್ದು, ಈ ವೇಳೆ ಬೆಂಗಳೂರಿನ ವಾಲ್ಮೀಕಿ ಪ್ರತಿಮೆಯಿಂದ ಪ್ರತಿಭಟನೆ ಶುರು ಮಾಡಿದೆ. ಈ ವೇಳೆ ವಿಧಾನಸೌಧಕ್ಕೆ ಆಗಮಿಸಿದ ಸಿಎಂ ಸಿದ್ದರಾಮಯ್ಯಗೆ ಪ್ರತಿಭಟನೆ ಬಿಸಿ ತಟ್ಟಿದ್ದು, ಬಿಜೆಪಿ ನಾಯಕರು ರಾಜ್ಯ ಸರ್ಕಾರದ ವಿರುದ್ಧ ದಿಕ್ಕಾರ ಕೂಗಿದ್ದಾರೆ.
ವಾಲ್ಮೀಕಿ ನಿಗಮದ ಬಹುಕೋಟಿ ಹಗರಣ, ಎಸ್.ಸಿ.ಎಸ್.ಪಿ/ಟಿ.ಎಸ್.ಪಿ. ಅನುದಾನ ದುರ್ಬಳಕೆ ಹಾಗೂ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರ ಖಂಡಿಸಿ ಜುಲೈ 15ರ ಸೋಮವಾರ ಬೆಂಗಳೂರಿನ ಶಾಸಕರ ಭವನದ ಮಹರ್ಷಿ ವಾಲ್ಮೀಕಿ ಪ್ರತಿಮೆ ಬಳಿ ಬಿಜೆಪಿ ಪ್ರತಿಭಟನೆ ನಡೆಸಲಿದೆ ಎಂದು ಬಿಜೆಪಿ ತಿಳಿಸಿದೆ.