ಭಾರತ ತಂಡವು ಟಿ20 ವಿಶ್ವಕಪ್ ಗೆಲುವಿನ ವೇಳೆಯಲ್ಲಿ ಮುಖ್ಯ ಕೋಚ್ ಆಗಿದ್ದ ಕನ್ನಡಿಗ ರಾಹುಲ್ ದ್ರಾವಿಡ್ ಅವರಿಗೆ ಬಿಜೆಪಿ ಶಾಸಕ ಸುರೇಶ್ ಕುಮಾರ್ ಸನ್ಮಾನಿಸುವಂತ ಮನವಿನ್ನು ಸದನದಲ್ಲಿ ಮಾಡಿದರು. ಶಾಸಕ ಸುರೇಶ್ ಕುಮಾರ್ ಅವರ ಮನವಿಗೆ ಸದನದ ಎಲ್ಲಾ ಸದಸ್ಯರು ಒಕ್ಕೊರಲಿನಿಂದ ಒಮ್ಮತದ ಒಪ್ಪಿಗೆಯನ್ನು ಸೂಚಿಸಿದರು.
ಈ ಹಿನ್ನಲೆಯಲ್ಲಿ ವಿಧಾನಸಭೆಯಿಂದ ಭಾರತ ತಂಡವು ಟಿ20 ವಿಶ್ವಕಪ್ ಗೆಲುವಿಗೆ ಕಾರಣವಾದಂತ ಮುಖ್ಯ ಕೋಚ್ ಕನ್ನಡಿಗ ರಾಹುಲ್ ದ್ರಾವಿಡ್ ಅವರಿಗೆ ಅಭಿನಂದನೆ ಸಲ್ಲಿಸುವಂತ ನಿರ್ಣಯವನ್ನು ಕೈಗೊಳ್ಳಲಾಗಿದೆ ಅಂತ ಸ್ಪೀಕರ್ ಯು.ಟಿ ಖಾದರ್ ಪ್ರಕಟಿಸಿದರು.
ಅಂದಹಾಗೇ ಕಳೆದ ಜೂನ್.29 ರಂದು ನಡೆದಿದ್ದ ಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ 7 ರನ್‍ಗಳ ರೋಚಕ ಗೆಲುವು ಸಾಧಿಸಿತ್ತು. ಭಾರತ ಟಿ20 ವಿಶ್ವಕಪ್ ನಲ್ಲಿ ಭರ್ಜರಿ ಗೆಲುವು ಸಾಧಿಸಿತ್ತು. ಈ ಮೂಲಕ ಭಾರತ 17 ವರ್ಷಗಳ ನಂತರ ಟಿ 20 ವಿಶ್ವಕಪ್ ಹಾಗೂ 13 ವರ್ಷಗಳ ನಂತರ ಐಸಿಸಿ ಟ್ರೋಫಿಯನ್ನು ಟೀಂ ಇಂಡಿಯ ಗೆದ್ದುಕೊಂಡಂತೆ ಆಗಿತ್ತು.
BIG UPDATE: ನಾಳೆ ಸಾಗರ ತಾಲ್ಲೂಕಿನ ಶಾಲೆಗಳಿಗೆ ಮಾತ್ರವೇ ರಜೆ, ಕಾಲೇಜುಗಳಿಗೆ ಇಲ್ಲ: DDPI ಸ್ಪಷ್ಟನೆ
HD ಕುಮಾರಸ್ವಾಮಿ ಸರ್ವಪಕ್ಷ ಸಭೆಗೆ ಬರದೇ ‘ಬಾಡೂಟಕ್ಕೆ’ ಹೋಗಿದ್ದು ದುರಂತ : ಸಚಿವ ಚೆಲುವರಾಯಸ್ವಾಮಿ