ಮಡಿಕೇರಿ : ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ಮುಖಾಂತರ ಸರ್ಕಾರದ ಮಹತ್ತರ ಯೋಜನೆಯಾದ ಯುವಜನತೆಯ ಉಜ್ವಲ ಭವಿಷ್ಯಕ್ಕಾಗಿ ಕರ್ನಾಟಕ ಸರ್ಕಾರದ ಗ್ಯಾರಂಟಿ ಯೋಜನೆಗೆ ಚಾಲನೆ ನೀಡಲಾಗಿದೆ.
ಯುವನಿಧಿ ಯೋಜನೆಯಡಿ ಸೇವಾಸಿಂಧು ಪೋರ್ಟಲ್ನಲ್ಲಿ ನೋಂದಾಯಿಸಿರುವ ಕೊಡಗು ಜಿಲ್ಲೆಗೆ ಸಂಬಂಧಿಸಿದ ಅರ್ಹ ಫಲಾನುಭವಿಗಳು ತಮ್ಮ ವಿದ್ಯಾರ್ಹತೆಗೆ ಸಂಬಂಧಿಸಿದ ಮೂಲ ಅಂಕಪತ್ರಗಳು, ಆಧಾರ್ ಕಾರ್ಡ್ ಹಾಗೂ ಇತರ ದಾಖಲಾತಿಗಳೊಂದಿಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಗೆ, (ರೂಂ.ನಂ-22, ಎರಡನೇ ಮಹಡಿ, ಜಿಲ್ಲಾಡಳಿತ ಭವನ ಕಟ್ಟಡ ಕೊಡಗು ಜಿಲ್ಲೆ, ಮಡಿಕೇರಿ) ಇಲ್ಲಿಗೆ ಪರಿಶೀಲನೆಗಾಗಿ ಹಾಜರಾಗಬೇಕು.
ಹಾಗೆಯೇ ಯುವನಿಧಿ ಯೋಜನೆಗೆ ಅರ್ಹರಾದ ಎಲ್ಲಾ ಫಲಾನುಭವಿಗಳು ಪ್ರತಿ ಮಾಹೆಯ 25 ರೊಳಗೆ ಉನ್ನತ ವ್ಯಾಸಂಗ ಮುಂದುವರೆಸದಿರುವ ಕುರಿತು ಹಾಗೂ ಯಾವುದೇ ಉದ್ಯೋಗ ಹೊಂದಿಲ್ಲದಿರುವ ಕುರಿತು ಸ್ವಯಂ ಘೋಷಣೆ ನೀಡಬೇಕಿದೆ ಎಂದು ಜಿಲ್ಲಾ ಉದ್ಯೋಗಾಧಿಕಾರಿ ರೇಖಾ ಗಣಪತಿ ಅವರು ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗೆ ಸಹಾಯವಾಣಿ ಸಂಖ್ಯೆ 1800 599 9918 ಗೆ ಕರೆ ಮಾಡುವ ಮೂಲಕ ಅಥವಾ ಜಿಲ್ಲಾ ಉದ್ಯೋಗ ವಿನಿಮಯ, ಕಚೇರಿ ಮಡಿಕೇರಿ ಇವರನ್ನು ಕಚೇರಿ ವೇಳೆಯಲ್ಲಿ 8296020826 / 8123312319 ನ್ನು ಸಂಪರ್ಕಿಸಿ ಮಾಹಿತಿ ಪಡೆಯಬಹುದು ಎಂದು ಜಿಲ್ಲಾ ಉದ್ಯೋಗಾಧಿಕಾರಿ ಅವರು ತಿಳಿಸಿದ್ದಾರೆ.
BREAKING: ಜು.18ರಂದು ಮಹತ್ವದ ‘ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ’ ನಿಗದಿ | Karnataka Congress
HD ಕುಮಾರಸ್ವಾಮಿ ಸರ್ವಪಕ್ಷ ಸಭೆಗೆ ಬರದೇ ‘ಬಾಡೂಟಕ್ಕೆ’ ಹೋಗಿದ್ದು ದುರಂತ : ಸಚಿವ ಚೆಲುವರಾಯಸ್ವಾಮಿ