Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಚುನಾವಣಾ ಆಯೋಗದ ಮೇಲೆ ನಂಬಿಕೆ ಇಲ್ಲದಿದ್ರೆ ಲೋಕಸಭೆ ಸ್ಥಾನಕ್ಕೆ ರಾಜೀನಾಮೆ ನೀಡಿ : ರಾಹುಲ್ ಗಾಂಧಿಗೆ ಬಿಜೆಪಿ ಸವಾಲು

09/08/2025 10:06 PM

BREAKING : ಬಾಹ್ಯಾಕಾಶದಲ್ಲಿ 5 ತಿಂಗಳು ನಾಲ್ವರು ಗಗನಯಾತ್ರಿಗಳ ಹೊತ್ತ ‘ನಾಸಾದ ಕ್ರೂ-10 ಮಿಷನ್’ ಪೆಸಿಫಿಕ್’ನಲ್ಲಿ ಯಶಸ್ವಿ ಲ್ಯಾಂಡಿಂಗ್

09/08/2025 9:40 PM

BREAKING: ಮತ್ತೆ ರಷ್ಯಾದಲ್ಲಿ 6.0 ತೀವ್ರತೆಯಲ್ಲಿ ಪ್ರಬಲ ಭೂಕಂಪನ | Earthquake In Russia

09/08/2025 9:23 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘ಆರ್ಯ ವೈಶ್ಯ ಸಮುದಾಯ’ದವರಿಗೆ ಗುಡ್ ನ್ಯೂಸ್: ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ
KARNATAKA

‘ಆರ್ಯ ವೈಶ್ಯ ಸಮುದಾಯ’ದವರಿಗೆ ಗುಡ್ ನ್ಯೂಸ್: ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

By kannadanewsnow0915/07/2024 6:33 PM

ಮಡಿಕೇರಿ : ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ 2024-25 ನೇ ಸಾಲಿನಲ್ಲಿ ವಿವಿಧ ಯೋಜನೆ ಅನುಷ್ಠಾನಗೊಳಿಸಲಾಗುತ್ತಿದೆ ಹಾಗೂ ಈ ಯೋಜನೆಗಳಡಿ ಸಾಲ-ಸೌಲಭ್ಯವನ್ನು ಪಡೆಯಲು ಇಚ್ಛಿಸುವವರು ಕಡ್ಡಾಯವಾಗಿ ಆನ್‍ಲೈನ್ ವಿಳಾಸ: kacdc.karnataka.gov.in ರ ಮೂಲಕ ಅರ್ಜಿ ಸಲ್ಲಿಸಬೇಕಿದೆ. ಅರ್ಜಿ ಸಲ್ಲಿಸಲು ಆಗಸ್ಟ್ 31 ಕೊನೆ ದಿನವಾಗಿದೆ.

ಅರ್ಜಿ ಸಲ್ಲಿಸಲು ಇರಬೇಕಾದ ಸಾಮಾನ್ಯ ಅರ್ಹತೆಗಳು: ಸಾಮಾನ್ಯ ವರ್ಗದಲ್ಲಿ ಆರ್ಯ ವೈಶ್ಯ ಸಮುದಾಯಕ್ಕೆ ಸೇರಿರಬೇಕು. ಜಾತಿ ಮತ್ತು ಆದಾಯ ಪ್ರಮಾಣ ಪತ್ರ “ನಮೂನೆ-ಜಿ” ಯಲ್ಲಿ ಪಡೆದಿರಬೇಕು (ಪ್ರಮಾಣ ಪತ್ರವು ಚಾಲ್ತಿಯಲ್ಲಿರಬೇಕು), ಅರ್ಜಿದಾರರು ಕರ್ನಾಟಕ ರಾಜ್ಯದವರಾಗಿರಬೇಕು ಹಾಗೂ ಅವರ ಖಾಯಂ ವಿಳಾಸವು ಕರ್ನಾಟಕ ರಾಜ್ಯದಲ್ಲಿರಬೇಕು, ಅರ್ಜಿದಾರರು ತಮ್ಮ ಆಧಾರ್ ಸಂಖ್ಯೆಗೆ ತಮ್ಮ ಮೊಬೈಲ್ ಸಂಖ್ಯೆಯನ್ನು ಜೋಡಣೆ ಮಾಡಿರಬೇಕು, ಅರ್ಜಿದಾರರು ತಮ್ಮ ಬ್ಯಾಂಕ್ ಖಾತೆಗೆ ಆಧಾರ್ ಸಂಖ್ಯೆಯನ್ನು ಸೀಡ್ ಮಾಡಿಸಿರಬೇಕು. ಆಯ್ಕೆ ಮಾಡುವಾಗ ಮಹಿಳೆಯರಿಗೆ ಶೇ.33, ವಿಶೇಷಚೇತನರಿಗೆ ಶೇ.5 ಹಾಗೂ ತೃತೀಯ ಲಿಂಗಳಿಗೆ ಶೇ.5 ಮೀಸಲಾತಿ ಇರಿಸಿದೆ. ಒಂದು ಕುಟುಂಬದಲ್ಲಿ ಒಬ್ಬರು ಮಾತ್ರ ಸಾಲ ಸೌಲಭ್ಯ ಪಡೆಯಲು ಅರ್ಹರಾಗಿರುತ್ತಾರೆ. (ಅರಿವು ಶೈಕ್ಷಣಿಕ ಸಾಲ ಯೋಜನೆಯಲ್ಲಿ ಮಾತ್ರ ಇಬ್ಬರಿಗೆ ಅವಕಾಶವಿರುತ್ತದೆ).

ಸ್ವಯಂ-ಉದ್ಯೋಗ ನೇರ ಸಾಲ ಯೋಜನೆಯ ಅರ್ಹತೆಗಳು: ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನ ರೂ.3 ಲಕ್ಷಗಳ ಮಿತಿಯೊಳಗಿರಬೇಕು. ಅರ್ಜಿದಾರರು 18 ವರ್ಷ ಮೇಲ್ಪಟ್ಟು 55 ವರ್ಷದ ಒಳಗಿನವರಾಗಿರಬೇಕು. ಈ ಯೋಜನೆಯಲ್ಲಿ ರೂ.1 ಲಕ್ಷ ಸಾಲ ಒದಗಿಸಲಾಗುವುದು. ಈ ಮೊತ್ತದಲ್ಲಿ ಶೇ.20 ರಷ್ಟು ಸಹಾಯಧನ ಹಾಗೂ ಶೇ.80ರಷ್ಟು ಸಾಲವನ್ನು ವಾರ್ಷಿಕ ಶೇ.4ರ ಬಡ್ಡಿ ದರದಲ್ಲಿ ಮಂಜೂರು ಮಾಡಲಾಗುವುದು, 2 ತಿಂಗಳ ವಿರಾಮ ಅವಧಿ ಇರುತ್ತದೆ. ನಂತರ ಸಾಲವನ್ನು 34 ಮಾಸಿಕ ಕಂತುಗಳಲ್ಲಿ ಮರುಪಾವತಿಸಬೇಕು. 2019-20 ಮತ್ತು 2020-21ನೇ ಸಾಲಿನ ಫಲಾನುಭವಿಗಳು ಪಡೆದ ಸಾಲವನ್ನು ಅವಧಿಯೊಳಗೆ ಸಂಪೂರ್ಣವಾಗಿ ಮರುಪಾವತಿಸಿದ್ದಲ್ಲಿ, ಪುನಃ ಅರ್ಜಿ ಸಲ್ಲಿಸಲು ಅವಕಾಶವಿದೆ.

ಬ್ಯಾಂಕ್‍ಗಳ ಸಹಯೋಗದೊಂದಿಗೆ ಆರ್ಯ ವೈಶ್ಯ ಆಹಾರ ವಾಹಿನಿ/ ವಾಹಿನಿ ಯೋಜನೆಯ ಅರ್ಹತೆಗಳು: ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಮತ್ತು ನಗರ ಪ್ರದೇಶದವರಿಗೆ ರೂ.6 ಲಕ್ಷಗಳ ಮಿತಿಯೊಳಗಿರಬೇಕು. 21 ವರ್ಷ ಮೇಲ್ಪಟ್ಟು 55 ವರ್ಷದ ಒಳಗಿನವರಾಗಿರಬೇಕು. ಅಭ್ಯರ್ಥಿಯು ಯೆಲ್ಲೋ ಬೋರ್ಡ್ (ಎಲೆಕ್ಟ್ರಿಕ್/ಸಿ.ಎನ್.ಜಿ) ತ್ರಿಚಕ್ರ ವಾಹನ ಅಥವಾ ನಾಲ್ಕು ಚಕ್ರದ ವಾಹನವನ್ನು ಖರೀದಿಸಲು ನಿಗಮದಿಂದ ರೂ.1 ಲಕ್ಷದವರೆಗೆ ಸಬ್ಸಿಡಿ ನೀಡಲಾಗುವುದು. ಬಾಕಿ ಮೊತ್ತವನ್ನು ಯಾವುದಾದರು ಬ್ಯಾಂಕ್‍ಗಳಿಂದ ಸಾಲ ಪಡೆಯಬೇಕಿದೆ. ವಾಹನವನ್ನು ಆಹಾರ ವಾಹಿನಿಯನ್ನಾಗಿ ಪರಿವರ್ತಿಸಿದ್ದಲ್ಲಿ ಮಾತ್ರ ಎರಡನೇ ಕಂತಿನ ಮೊತ್ತ ರೂ.1 ಲಕ್ಷಗಳ ಸಬ್ಸಿಡಿ ಯನ್ನು ನೇರವಾಗಿ ಫಲಾನುಭವಿಗೆ ಡಿ.ಬಿ.ಟಿ ಮೂಲಕ ಬಿಡುಗಡೆ ಮಾಡಲಾಗುವುದು. Only after doing fabrication of vehicle in kitchen grade steel 2nd instalment of 1.00lakh subsidy will be released through DBT.

ವಾಸವಿ ಜಲಶಕ್ತಿ ಯೋಜನೆಯ ಅರ್ಹತೆಗಳು: ಈ ಯೋಜನೆಯಡಿ 2 ರಿಂದ 15 ಎಕರೆ ಕೃಷಿ ಭೂಮಿ ಹೊಂದಿರುವವರಿಗೆ ನೀರಾವರಿ ಸೌಲಭ್ಯವನ್ನು ಒದಗಿಸಲು ಸಾಲ-ಸಹಾಯಧನವನ್ನು ನೀಡಲಾಗುವುದು. ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಮತ್ತು ನಗರ ಪ್ರದೇಶದವರಿಗೆ ರೂ.6 ಲಕ್ಷಗಳ ಮಿತಿಯೊಳಗಿರಬೇಕು. 21 ವರ್ಷ ಮೇಲ್ಪಟ್ಟು 55 ವರ್ಷದ ಒಳಗಿನವರಾಗಿರಬೇಕು. ಈ ಯೋಜನೆಯಡಿ ಗರಿಷ್ಠ ರೂ.2 ಲಕ್ಷಗಳ ಸಾಲವನ್ನು ವಾರ್ಷಿಕ ಶೇ.4ರ ಬಡ್ಡಿದರದಲ್ಲಿ ಒದಗಿಸಲಾಗುವುದು ಹಾಗೂ ವಿದ್ಯುದ್ದೀಕರಣಕ್ಕಾಗಿ ರೂ.50 ಸಾವಿರಗಳ ಸಹಾಯಧನ ನೀಡಲಾಗುವುದು. 6 ತಿಂಗಳ ವಿರಾಮಾವಧಿ ಇರುತ್ತದೆ. ನಂತರ ಸಾಲವನ್ನು 34 ಮಾಸಿಕ ಕಂತುಗಳಲ್ಲಿ ಮರುಪಾವತಿಸಬೇಕು.

ಅರಿವು ಶೈಕ್ಷಣಿಕ ಸಾಲ ಯೋಜನೆಯ ಅರ್ಹತೆಗಳು:-ಈ ಯೋಜನೆಯಲ್ಲಿ ಸಿ.ಇ.ಟಿ./ಎನ್.ಇ.ಇ.ಟಿ ಪ್ರವೇಶ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ವೃತ್ತಿಪರ ಕೋರ್ಸ್ ಹಾಗೂ ಪಿಎಚ್‍ಡಿನಲ್ಲಿ ವ್ಯಾಸಂಗ ಮಾಡುವ ಆರ್ಯ ವೈಶ್ಯ ವಿದ್ಯಾರ್ಥಿಗಳಿಗೆ ವಾರ್ಷಿಕ ರೂ.1 ಲಕ್ಷಗಳ ಸಾಲವನ್ನು ಶೇ.2 ರ ಬಡ್ಡಿದರದಲ್ಲಿ ಶೈಕ್ಷಣಿಕ ಸಾಲ ನೀಡಲಾಗುವುದು. ವ್ಯಾಸಂಗ ಪೂರ್ಣಗೊಂಡ ನಂತರ 04 ತಿಂಗಳ ವಿರಾಮಾವಧಿ ಇರುತ್ತದೆ. ನಂತರ ಸಾಲವನ್ನು 36 ಮಾಸಿಕ ಕಂತುಗಳಲ್ಲಿ ಮರುಪಾವತಿಸಬೇಕು. 18 ವರ್ಷ ಮೇಲ್ಪಟ್ಟು 35 ವರ್ಷದ ಒಳಗಿನವರಾಗಿರಬೇಕು. ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಮತ್ತು ನಗರ ಪ್ರದೇಶದವರಿಗೆ ರೂ.6 ಲಕ್ಷಗಳ ಮಿತಿಯೊಳಗಿರಬೇಕು. (ಈ ಯೋಜನೆಗೆ ಸಂಬಂಧಪಟ್ಟಂತೆ ಸಿ.ಇ.ಟಿ ಮತ್ತು ನೀಟ್ ಕೌನ್ಸೆಲಿಂಗ್ ಮುಗಿದ ನಂತರ ಅರ್ಜಿಗಳನ್ನು ಸ್ವೀಕರಿಸಲಾಗುವುದು).

ಈ ಯೋಜನೆಗಳ ಮಾರ್ಗಸೂಚಿ ಹಾಗೂ ಅರ್ಹತೆಗಳ ಸಂಕ್ಷಿಪ್ತ ವಿವರಗಳನ್ನು ಈ ಕ್ಯೂ ಆರ್ ಕೋಡ್‍ಅನ್ನು ಗೂಗಲ್‍ನಲ್ಲಿ ಸ್ಕ್ಯಾನ್ ಮಾಡಿ ಪಡೆಯಬಹುದಾಗಿದೆ.

ಹೆಚ್ಚಿನ ಮಾಹಿತಿಗೆ ನಿಗಮದ ಸಹಾಯವಾಣಿ: 9448451111 (ಬೆಳಗ್ಗೆ 10 ರಿಂದ ಸಂಜೆ:5.30 ವರೆಗೆ ಸಂಪರ್ಕಿಸಬಹುದಾಗಿದೆ). ಯೋಜನೆಗಳ ಮಾರ್ಗಸೂಚಿಗಳು, ಸಲ್ಲಿಸಬೇಕಾದ ದಾಖಲೆಗಳು, ಜಿಲ್ಲಾ ವ್ಯವಸ್ಥಾಪಕರ ಕಚೇರಿ ವಿಳಾಸಗಳನ್ನು ಹಾಗೂ ಎಲ್ಲಾ ವಿವರಗಳನ್ನು kacdc.karnataka.gov.in ಇಲ್ಲಿ ತಿಳಿಯಬಹುದು ಎಂದು ಕರ್ನಾಟಕ ಆರ್ಯ ವೈಶ್ಯ ಸಮುದಾಯದ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.

‘ಯುವನಿಧಿ ಯೋಜನೆ’ ಫಲಾನಿಭವಿಗಳೇ ಗಮನಿಸಿ: ನೀವು ಈ ‘ಪ್ರಮಾಣಪತ್ರ’ ಸಲ್ಲಸೇ ಇದ್ರೆ ಬರಲ್ಲ ಹಣ | Yuvanidhi Scheme

HD ಕುಮಾರಸ್ವಾಮಿ ಸರ್ವಪಕ್ಷ ಸಭೆಗೆ ಬರದೇ ‘ಬಾಡೂಟಕ್ಕೆ’ ಹೋಗಿದ್ದು ದುರಂತ : ಸಚಿವ ಚೆಲುವರಾಯಸ್ವಾಮಿ

Share. Facebook Twitter LinkedIn WhatsApp Email

Related Posts

ಯಾರದ್ದೋ ಮಾತು ಕೇಳಿ ಕುಟುಂಬದ ವಿರುದ್ಧ ಮಾತನಾಡಬೇಡಿ: ಫ್ಯಾನ್ಸ್‌ಗೆ ‘ನಟ ಅನಿರುದ್ಧ್’ ಮನವಿ

09/08/2025 9:07 PM1 Min Read

Rain In Karnataka: ಇಂದಿನಿಂದ ಆಗಸ್ಟ್.13ರವರೆಗೆ ಭಾರಿ ಮಳೆ: ಈ ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

09/08/2025 8:38 PM1 Min Read

ಬೆಂಗಳೂರಿನ ‘ಲಾಲ್ ಬಾಗ್ ಪ್ಲವರ್ ಶೋ’ಗೆ ಭರ್ಜರಿ ರೆಸ್ಪಾನ್ಸ್: ನಿನ್ನೆ ಒಂದೇ ದಿನ 32,16,720 ಮಂದಿ ಭೇಟಿ

09/08/2025 8:33 PM1 Min Read
Recent News

ಚುನಾವಣಾ ಆಯೋಗದ ಮೇಲೆ ನಂಬಿಕೆ ಇಲ್ಲದಿದ್ರೆ ಲೋಕಸಭೆ ಸ್ಥಾನಕ್ಕೆ ರಾಜೀನಾಮೆ ನೀಡಿ : ರಾಹುಲ್ ಗಾಂಧಿಗೆ ಬಿಜೆಪಿ ಸವಾಲು

09/08/2025 10:06 PM

BREAKING : ಬಾಹ್ಯಾಕಾಶದಲ್ಲಿ 5 ತಿಂಗಳು ನಾಲ್ವರು ಗಗನಯಾತ್ರಿಗಳ ಹೊತ್ತ ‘ನಾಸಾದ ಕ್ರೂ-10 ಮಿಷನ್’ ಪೆಸಿಫಿಕ್’ನಲ್ಲಿ ಯಶಸ್ವಿ ಲ್ಯಾಂಡಿಂಗ್

09/08/2025 9:40 PM

BREAKING: ಮತ್ತೆ ರಷ್ಯಾದಲ್ಲಿ 6.0 ತೀವ್ರತೆಯಲ್ಲಿ ಪ್ರಬಲ ಭೂಕಂಪನ | Earthquake In Russia

09/08/2025 9:23 PM

BREAKING: ಕರ್ನಾಟಕದಲ್ಲಿ ರೈತರಿಗೆ ಬೇಕಿರುವಷ್ಟು ರಸಗೊಬ್ಬರ ದಾಸ್ತಾನಿದೆ: ಲೋಕಸಭೆಯಲ್ಲೇ ಸರ್ಕಾರ ಮಾಹಿತಿ

09/08/2025 9:20 PM
State News
KARNATAKA

ಯಾರದ್ದೋ ಮಾತು ಕೇಳಿ ಕುಟುಂಬದ ವಿರುದ್ಧ ಮಾತನಾಡಬೇಡಿ: ಫ್ಯಾನ್ಸ್‌ಗೆ ‘ನಟ ಅನಿರುದ್ಧ್’ ಮನವಿ

By kannadanewsnow0909/08/2025 9:07 PM KARNATAKA 1 Min Read

ಬೆಂಗಳೂರು: ಸಾಹಸ ಸಿಂಹ ವಿಷ್ಣುವರ್ಧನ್ ಸಮಾಧಿ ಸ್ಥಳ ನೆಲಸಮ ಮಾಡಿರೋದು ವಿವಾಧಕ್ಕೆ, ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿದೆ. ಈ ನಡುವೆ ನಟ…

Rain In Karnataka: ಇಂದಿನಿಂದ ಆಗಸ್ಟ್.13ರವರೆಗೆ ಭಾರಿ ಮಳೆ: ಈ ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

09/08/2025 8:38 PM

ಬೆಂಗಳೂರಿನ ‘ಲಾಲ್ ಬಾಗ್ ಪ್ಲವರ್ ಶೋ’ಗೆ ಭರ್ಜರಿ ರೆಸ್ಪಾನ್ಸ್: ನಿನ್ನೆ ಒಂದೇ ದಿನ 32,16,720 ಮಂದಿ ಭೇಟಿ

09/08/2025 8:33 PM

ಬೆಂಗಳೂರು ಜನತೆ ಗಮನಕ್ಕೆ: ಈ ಮಾರ್ಗದಲ್ಲಿ ಹೊಸದಾಗಿ ‘BMTC ಬಸ್ ಸಂಚಾರ’ ಆರಂಭ

09/08/2025 7:54 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.