ಮಡಿಕೇರಿ : ಪ್ರಾದೇಶಿಕ ಗ್ರಾಮೀಣ ಬ್ಯಾಂಕ್‍ಗಳಲ್ಲಿ ಖಾಲಿ ಇರುವ ಕ್ಲರಿಕಲ್ ಮತ್ತು ಪೊಬೇಶನರಿ ಆಫೀಸರ್ ಹುದ್ದೆಗಳು ಹಾಗೂ ರಾಷ್ಟ್ರೀಕೃತ ಬ್ಯಾಂಕ್‍ಗಳಲ್ಲಿ ಖಾಲಿ ಇರುವ ಕ್ಲರಿಕಲ್ ಹುದ್ದೆಗಳ ನೇಮಕಾತಿಗೆ ಐಬಿಪಿಎಸ್ ಸಂಸ್ಥೆ ಈಗಾಗಲೇ ಅರ್ಜಿ ಆಹ್ವಾನಿಸಿದೆ.
ಈ ವರ್ಷದಲ್ಲಿ ಇಲ್ಲಿಯವರೆಗೆ ಒಟ್ಟು 15,215 ಕ್ಕೂ ಹೆಚ್ಚಿನ ಬ್ಯಾಂಕ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದಂತಾಗಿದೆ. ಮುಂದಿನ ದಿನಗಳಲ್ಲಿ ರಾಷ್ಟ್ರೀಕೃತ ಬ್ಯಾಂಕ್‍ಗಳಲ್ಲಿ ಖಾಲಿ ಇರುವ ಪೊಬೇಶನರಿ ಆಫೀಸರ್ ಹುದ್ದೆಗಳು, ಎಸ್‍ಬಿಐ, ಆರ್‍ಬಿಐ ಹಾಗೂ ಖಾಸಗಿ ಬ್ಯಾಂಕ್‍ಗಳಲ್ಲಿ ಖಾಲಿ ಇರುವ ಸಾವಿರಾರು ಕ್ಲರಿಕಲ್ ಹಾಗೂ ಪೊಬೇಶನರಿ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗುವುದು ತಿಳಿದು ಬಂದಿದೆ.
ಹಾಸನದ ಸಾಲಗಾಮೆ ರಸ್ತೆಯಲ್ಲಿರುವ ಕೃಷಿಕ್ ಸರ್ವೋದಯ ಫೌಂಡೇಶನ್‍ನಲ್ಲಿ ಬ್ಯಾಂಕ್ ನೇಮಕಾತಿ ಪರೀಕ್ಷೆಗಳ ತಯಾರಿಗೆ ಜುಲೈ, 16 ರಿಂದ 18 ರವರೆಗೆ ಬೆಳಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಡೆಮೋ ಉಚಿತ ತರಗತಿಗಳನ್ನು ಆಯೋಜಿಸಲಾಗಿದ್ದು, ಆಸಕ್ತರು ಈ ಅವಕಾಶದ ಉಪಯೋಗಪಡೆದುಕೊಳ್ಳಲು ಕೂಡಲೇ ಮೊಬೈಲ್ ಸಂಖ್ಯೆ 8660217739 ಸಂಪರ್ಕಿಸಿ ಉಚಿತ ಡೆಮೋ ತರಗತಿಗಳಿಗೆ ಹಾಜರಾಗಬಹುದು ಎಂದು ಹಾಸನ ಶಾಖೆಯ ಕೃಷಿಕ್ ಸರ್ವೋದಯ ಫೌಂಡೇಶನ್‍ನ ಕಾರ್ಯದರ್ಶಿ ಅವರು ತಿಳಿಸಿದ್ದಾರೆ.
‘ಆರ್ಯ ವೈಶ್ಯ ಸಮುದಾಯ’ದವರಿಗೆ ಗುಡ್ ನ್ಯೂಸ್: ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ
HD ಕುಮಾರಸ್ವಾಮಿ ಸರ್ವಪಕ್ಷ ಸಭೆಗೆ ಬರದೇ ‘ಬಾಡೂಟಕ್ಕೆ’ ಹೋಗಿದ್ದು ದುರಂತ : ಸಚಿವ ಚೆಲುವರಾಯಸ್ವಾಮಿ