ಕಲಬುರ್ಗಿ : ಕಲಬುರ್ಗಿ ಜಿಲ್ಲೆಯಾದ್ಯಂತ ಧಾರಾಕಾರ ಮಳೆಯಿಂದ ಹಲವು ಕಡೆಗಳಲ್ಲಿ ಅವಾಂತರ ಸೃಷ್ಟಿಯಾಗಿದೆ. ಇದರಿಂದ ಜನ ಜೀವನ ಕೂಡ ಅಸ್ತವ್ಯಸ್ತಗೊಂಡಿದೆ. ಇದೀಗ ಕಲಬುರ್ಗಿ ಜಿಲ್ಲೆಯ ಅಫ್ಜಲ್ಪುರ ತಾಲೂಕಿನ ಗಾಣಗಾಪುರದ ದತ್ತಾತ್ರೇಯ ದೇವಸ್ಥಾನದಲ್ಲಿ ಮಳೆ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿದೆ.
ಹೌದು ಕಲ್ಬುರ್ಗಿಯಲ್ಲಿ ಧಾರಾಕಾರ ಮಳೆಯಿಂದ ಅವಾಂತರ ಸೃಷ್ಟಿಯಾಗಿದ್ದು, ಗಾಣಗಪುರದಲ್ಲಿನ ದತ್ತಾತ್ರೇಯ ದೇಗುಲಕ್ಕೆ ನೀರು ನುಗ್ಗಿದೆ. ಕಲ್ಬುರ್ಗಿ ಜಿಲ್ಲೆಯ ಆಫ್ಜಲ್ ಪುರ ತಾಲೂಕಿನ ಗಾಣಗಾಪುರ ದೇವಾಲಯದ ಒಳಗೆ ನೀರು ನುಗ್ಗಿ ಭಕ್ತರು ಪರದಾಡಿದ್ದಾರೆ.ಅಲ್ಲದೆ ದೇವಸ್ಥಾನದ ಆವರಣದಲ್ಲಿರುವ ಅಂಗಡಿಗಳು ಕೂಡ ಮಳೆ ನೀರಿನಿಂದ ಜಲಾವೃತಗೊಂಡಿವೆ.