ಶಿವಮೊಗ್ಗ: ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿರುವುದರಿಂದ ಜುಲೈ.16ರ ನಾಳೆ ಶಿವಮೊಗ್ಗ ಜಿಲ್ಲೆಯ ಎಲ್ಲಾ ತಾಲ್ಲೂಕಿನ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆಯನ್ನು ಘೋಷಣೆ ಮಾಡಲಾಗಿದೆ.
ಈ ಕುರಿತಂತೆ ಶಿವಮೊಗ್ಗ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಅವರು ಆದೇಶ ಹೊರಡಿಸಿದ್ದು, ಶಿವಮೊಗ್ಗ ಜಿಲ್ಲೆಯಲ್ಲಿ ಸತತ ಮಳೆಯಾಗುತ್ತಿದೆ. ಈ ಹಿನ್ನಲೆಯಲ್ಲಿ ಜಿಲ್ಲೆಯ ಎಲ್ಲಾ ತಾಲ್ಲೂಕಿನ ಶಾಲಾ-ಕಾಲೇಜುಗಳಿಗೆ ಜುಲೈ.16ರ ನಾಳೆ ರಜೆಯನ್ನು ನೀಡಲಾಗುತ್ತಿದೆ ಅಂತ ತಿಳಿಸಿದ್ದಾರೆ.
ಅಂದಹಾಗೇ ಶಿವಮೊಗ್ಗ ಜಿಲ್ಲೆಯಲ್ಲಿ ಕಳೆದ ಎರಡು ಮೂರು ದಿನಗಳಿಂದ ಭಾರೀ ಮಳೆಯಾಗುತ್ತಿದೆ. ಈ ಹಿನ್ನಲೆಯಲ್ಲಿ ಹೊಸನಗರ ಹಾಗೂ ಸಾಗರ ತಾಲ್ಲೂಕಿನ ಶಾಲಾ-ಕಾಲೇಜುಗಳಿಗೆ ರಜೆಯನ್ನು ಘೋಷಣೆ ಮಾಡಲಾಗಿತ್ತು. ಈಗ ಜಿಲ್ಲಾಧಿಕಾರಿಗಳು ಶಿವಮೊಗ್ಗ ಜಿಲ್ಲೆಯ ಎಲ್ಲಾ ತಾಲ್ಲೂಕಿನ ಶಾಲಾ-ಕಾಲೇಜುಗಳಿಗೆ ರಜೆಯನ್ನು ನೀಡಿ ಆದೇಶಿಸಿದ್ದಾರೆ.
ವರದಿ: ವಸಂತ ಬಿ ಈಶ್ವರಗೆರೆ
BREAKING: ಭಾರೀ ಮಳೆ ಹಿನ್ನಲೆ: ನಾಳೆ ರಾಜ್ಯದ ಈ ಜಿಲ್ಲೆಯ ‘ಶಾಲಾ-ಕಾಲೇಜು’ಗಳಿಗೆ ರಜೆ ಘೋಷಣೆ | School Holiday