ಬೆಂಗಳೂರು : ರಾಜ್ಯದ್ಯಾಂತ ಜುಲೈ 13 ರಂದು ನಡೆದ ರಾಷ್ಟ್ರೀಯ ಲೋಕ ಅದಾಲತ್ ಗೆ ಭರ್ಜರಿ ಯಶಸ್ಸು ಸಿಕ್ಕಿದ್ದು, ರಾಜ್ಯಾದ್ಯಂತ ಒಟ್ಟು 40ಲಕ್ಷ ಪ್ರಕರಣಗಳನ್ನು ರಾಜೀ ಸಂಧಾನದ ಮೂಲಕ ಇತ್ಯರ್ಥಪಡಿಸಲಾಗಿದೆ.
ಈ ಕುರಿತು ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ಕಾರ್ಯನಿರ್ವಾಹಕ ಅಧ್ಯಕ್ಷ ನ್ಯಾಯಮೂರ್ತಿ ಕಾಮೇಶ್ವರ್ ರಾವ್ ಮಾಹಿತಿ ನೀಡಿದ್ದು, ಕರ್ನಾಟಕ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ರಾಜ್ಯಾದ್ಯಂತ ಜುಲೈ 13 ರಂದು ಹಮ್ಮಿಕೊಂಡಿದ್ದ ರಾಷ್ಟ್ರೀಯ ಲೋಕ ಅದಾಲತ್ ನಲ್ಲಿ ಕೋರ್ಟ್ ನಲ್ಲಿ ಬಾಕಿ ಇದ್ದ 40 ಲಕ್ಷ ಪ್ರಕರಣಗಳನ್ನು ರಾಜೀ ಸಂಧಾನದ ಮೂಲಕ ಇತ್ಯರ್ಥಪಡಿಸಲಾಗಿದೆ ಎಂದು ತಿಳಿಸಿದ್ದಾರೆ.
ಲೋಕಅದಾಲತ್ ನಲ್ಲಿ ಇದೇ ಮೊದಲ ಬಾರಿಗೆ ರಾಜೀ ಸಂಧಾನದ ಮೂಲಕ ಇಷ್ಟು ಪ್ರಕರಣಗಳನ್ನು ಇತ್ಯರ್ತ ಪಡಿಸಲಾಗಿದೆ. ಈ ಮೂಲಕ ಕಾನೂನು ಸೇವೆಗಳ ಪ್ರಾಧಿಕಾರ ದಾಖಲೆ ನಿರ್ಮಿಸಿದೆ. ರಾಜ್ಯಾದ್ಯಂತ ಒಟ್ಟು40,01,786 ಪ್ರಕರಣಗಳನ್ನು ಇರ್ಯರ್ಥಪಡಿಸಿ ವ್ಯಾಜ್ಯದಾರರಿಗೆ 2640ಕೋಟಿ ರೂ. ಪರಿಹಾರ ಕೊಡಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.