ಬೆಂಗಳೂರು: ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ 2024-25ನೇ ಸಾಲಿನಲ್ಲಿ ಸ್ವಯಂಉದ್ಯೋಗ ನೇರಸಾಲ ಯೋಜನೆ, ಬ್ಯಾಂಕ್‍ಗಳ ಸಹಯೋಗದೊಂದಿಗೆಆರ್ಯ ವೈಶ್ಯಆಹಾರ /ವಾಹಿನಿ ಯೋಜನೆ, ವಾಸವಿ ಜಲಶಕ್ತಿ ಯೋಜನೆ ಮತ್ತು ಅರಿವು ಶೈಕ್ಷಣಿಕ ಸಾಲ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಹಾಗೂ ಈ ಯೋಜನೆಗಳಡಿ ಸಾಲ-ಸೌಲಭ್ಯವನ್ನು ಪಡೆಯಲು ಇಚ್ಚಿಸುವವರು ಕಡ್ಡಾಯವಾಗಿ ಆನ್‍ಲೈನ್ ವಿಳಾಸ: https://kacdc.karnataka.gov.in ರ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಆರ್ಜಿ ಸಲ್ಲಿಸಲು ಆಗಸ್ಟ್ 31 ಕೊನೆಯ ದಿನಾಗಿರುತ್ತದೆ.
ಸಾಮಾನ್ಯ ವರ್ಗದಲ್ಲಿನ ಆರ್ಯ ವೈಶ್ಯ ಸಮುದಾಯಕ್ಕೆ ಸೇರಿದವರಾಗಿರಬೇಕು ಮತ್ತು “ನಮೂನೆ-ಜಿ” ಯಲ್ಲಿ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಪಡೆದಿರಬೇಕು.ಅರ್ಜಿದಾರರು ಕರ್ನಾಟಕ ರಾಜ್ಯದವರಾಗಿದ್ದು, ಅವರ ಖಾಯಂ ವಿಳಾಸವು ಕರ್ನಾಟಕ ರಾಜ್ಯದಲ್ಲಿರಬೇಕು. ಅರ್ಜಿದಾರರ ಮೊಬೈಲ್ ಸಂಖ್ಯೆಯು ಆಧಾರ್ ಸಂಖ್ಯೆಗೆ ಜೋಡಣೆಯಾಗಿರಬೇಕು. ಮತ್ತು ಬ್ಯಾಂಕ್‍ಖಾತೆಗೆ ಆಧಾರ್ ಸೀಡಿಂಗ್ ಆಗಿರಬೇಕು. ಅರ್ಹ ಅರ್ಜಿದಾರರುಗಳನ್ನು ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳ ಅಧ್ಯಕ್ಷತೆಯಲ್ಲಿ ರಚಿಸಿರುವ ಜಿಲ್ಲಾ ಮಟ್ಟದ ಆಯ್ಕೆ ಸಮಿತಿಯ ಮೂಲಕ ಆಯ್ಕೆ ಮಾಡಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ದಿ ನಿಗಮ ನಿಯಮಿತದ ವೆಬ್‍ಸೈಟ್ www.kacdc.karnataka.gov.in ನಲ್ಲಿ ಅಥವಾ ಕೇಂದ್ರ ಕಛೇರಿಯ ದೂರವಾಣಿ ಸಂಖ್ಯೆ:-9448451111 ಹಾಗೂ ಜಿಲ್ಲಾ ವ್ಯವಸ್ಥಾಪಕರು, ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ದಿ ನಿಗಮ ಬೆಂಗಳೂರು ಉತ್ತರ ಜಿಲ್ಲಾ ಕಛೇರಿಯ ದೂರವಾಣಿ ಸಂಖ್ಯೆ:-080-23539601ನ್ನು ಸಂಪರ್ಕಿಸಬಹುದು ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.