ಬೆಂಗಳೂರು: ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಖಾಸಗಿ ವಲಯದಲ್ಲಿಯೂ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಕಲ್ಪಿಸುವಂತ ಮಹತ್ವದ ಮಸೂಧೆ ಒಪ್ಪಿಗೆ ಸೂಚಿಸಲಾಗಿತ್ತು. ಈ ಮಾಹಿತಿ ಹಂಚಿಕೊಂಡು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಂತ ಸಿಎಂ ಸಿದ್ಧರಾಮಯ್ಯ, ಆ ಬಳಿಕ ಡಿಲಿಟ್ ಮಾಡಿದ್ದರು. ಈಗ ಮತ್ತೆ ಟ್ವಿಟ್ ಮಾಡಿದ್ದು, ಅದರಲ್ಲಿ ಏನು ಬರೆದಿದೆ ಅಂತ ಮುಂದೆ ಓದಿ.
ಈ ಕುರಿತಂತೆ ಮತ್ತೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದು, ಅದರಲ್ಲಿ ರಾಜ್ಯದ ಖಾಸಗಿ ಕೈಗಾರಿಕೆಗಳು ಹಾಗೂ ಇತರೆ ಸಂಸ್ಥೆಗಳಲ್ಲಿ ಕನ್ನಡಿಗರಿಗೆ ಆಡಳಿತಾತ್ಮಕ ಹುದ್ದೆಗಳಿಗೆ ಶೇ.50 ಹಾಗೂ ಆಡಳಿತಾತ್ಮಕವಲ್ಲದ ಹುದ್ದೆಗಳಿಗೆ ಶೇ.75 ಮೀಸಲಾತಿ ನಿಗದಿಪಡಿಸುವ ವಿಧೇಯಕಕ್ಕೆ ಸೋಮವಾರ ನಡೆದ ಸಚಿವ ಸಂಪುಟ ಸಭೆಯು ಒಪ್ಪಿಗೆ ನೀಡಿದೆ ಅಂತ ತಿಳಿಸಿದ್ದಾರೆ.
ಕನ್ನಡಿಗರು ಕನ್ನಡದ ನೆಲದಲ್ಲಿ ಉದ್ಯೋಗ ವಂಚಿತರಾಗುವುದನ್ನು ತಪ್ಪಿಸಿ, ತಾಯ್ನಾಡಿನಲ್ಲಿ ನೆಮ್ಮದಿಯ ಬದುಕು ಕಟ್ಟಿಕೊಳ್ಳಲು ಅವಕಾಶ ಕಲ್ಪಿಸಬೇಕು ಎಂಬುದು ನಮ್ಮ ಸರ್ಕಾರದ ಆಶಯ. ನಮ್ಮದು ಕನ್ನಡಪರವಾದ ಸರ್ಕಾರ. ಕನ್ನಡಿಗರ ಹಿತ ಕಾಯುವುದು ನಮ್ಮ ಆದ್ಯತೆಯಾಗಿದೆ ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದ್ದಾರೆ.
ರಾಜ್ಯದ ಖಾಸಗಿ ಕೈಗಾರಿಕೆಗಳು ಹಾಗೂ ಇತರೆ ಸಂಸ್ಥೆಗಳಲ್ಲಿ ಕನ್ನಡಿಗರಿಗೆ ಆಡಳಿತಾತ್ಮಕ ಹುದ್ದೆಗಳಿಗೆ ಶೇ.50 ಹಾಗೂ ಆಡಳಿತಾತ್ಮಕವಲ್ಲದ ಹುದ್ದೆಗಳಿಗೆ ಶೇ.75 ಮೀಸಲಾತಿ ನಿಗದಿಪಡಿಸುವ ವಿಧೇಯಕಕ್ಕೆ ಸೋಮವಾರ ನಡೆದ ಸಚಿವ ಸಂಪುಟ ಸಭೆಯು ಒಪ್ಪಿಗೆ ನೀಡಿದೆ.
ಕನ್ನಡಿಗರು ಕನ್ನಡದ ನೆಲದಲ್ಲಿ ಉದ್ಯೋಗ ವಂಚಿತರಾಗುವುದನ್ನು ತಪ್ಪಿಸಿ, ತಾಯ್ನಾಡಿನಲ್ಲಿ… pic.twitter.com/efmv4gJ25d
— CM of Karnataka (@CMofKarnataka) July 17, 2024
ದುಬೈ ರಾಜಕುಮಾರಿ ಶೇಖಾ ಮಹ್ರಾ ‘ಇನ್ಸ್ಟಾಗ್ರಾಮ್ ಪೋಸ್ಟ್’ನಲ್ಲೇ ಪತಿಗೆ ವಿಚ್ಛೇದನ | Dubai Princess Shaikha Mahra
ವಯಸ್ಸಾದ ಮಹಿಳೆಯರಿಗೆ ಗರ್ಭಕಂಠದ ಕ್ಯಾನ್ಸರ್ ವಿರುದ್ಧ MRNA-HPV ಲಸಿಕೆ ಬಳಸಲು ಸರ್ಕಾರ ಪರಿಗಣನೆ ?