ಬೆಂಗಳೂರು: ನಟ ದರ್ಶನ್ ಅವರು ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲುಪಾಲಾಗಿದ್ದಾರೆ. ನನಗೆ ಜೈಲೂಟ ಸೇರುತ್ತಿಲ್ಲ. ಮನೆಯೂಟಕ್ಕೆ ವ್ಯವಸ್ಥೆ ಮಾಡಿಕೊಡುವಂತೆ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ನ್ಯಾಯಪೀಠವು ಇಂದು ನಡೆಸಲಿದೆ.
ಸ್ಯಾಂಡಲ್ ವುಡ್ ನಟ ದರ್ಶನ್ ತೂಗುದೀಪ್ ಅವರು ಚಿತ್ರದುರ್ಗದ ರೇಣುಕಾಸ್ವಾಮಿ ಮರ್ಡರ್ ಕೇಸಲ್ಲಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲು ಸೇರಿದ್ದಾರೆ. ಜೈಲಿನಲ್ಲಿ ನೀಡಲಾಗುತ್ತಿರುವಂತ ಊಟ ನನಗೆ ಸೇರುತ್ತಿಲ್ಲ. ಅಲ್ಲದೇ ಈ ಊಟ ಸೇವಿಸಿದ ಮೇಲೆ ನನಗೆ ಅನಾರೋಗ್ಯ ಸಮಸ್ಯೆ ಕಾಡುತ್ತಿದೆ. ಬೇಧಿ ಆಗುತ್ತಿದೆ. ತೂಕ ಇಳಿಕೆಯಾಗುತ್ತಿದೆ ಅಂತ ಹೈಕೋರ್ಟ್ ಗೆ ವಕೀಲರ ಮೂಲಕ ಅರ್ಜಿ ಸಲ್ಲಿಸಿದ್ದರು.
ತನ್ನ ಪರ ವಕೀಲರ ಮೂಲಕ ಮನೆಯ ಊಟ ಪೂರೈಕೆಗೆ ಅನುಮತಿ ನೀಡುವಂತೆ ಪರಪ್ಪನ ಅಗ್ರಹಾರ ಜೈಲಿನ ಮೇಲ್ವಿಚಾರಕರಿಗೆ ನಿರ್ದೇಶನ ನೀಡುವಂತೆ ನಟ ದರ್ಶನ್ ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಿದ್ದರು.
ನಟ ದರ್ಶನ್ ಅವರು ತನ್ನ ವಕೀಲರ ಮೂಲಕ ಹೈಕೋರ್ಟ್ ಗೆ ಮನೆಯೂಟಕ್ಕೆ ಅನುಮತಿ ನೀಡುವಂತೆ ಕೋರಿ ಸಲ್ಲಿಸಿರುವಂತ ರಿಟ್ ಅರ್ಜಿಯನ್ನು ಇಂದು ಹೈಕೋರ್ಟ್ ನ್ಯಾಯಪೀಠವು ವಿಚಾರಣೆ ಕೈಗೆತ್ತಿಕೊಳ್ಳಲಿದೆ. ನಟ ದರ್ಶನ್ ಜೈಲೂಟ ಬೇಡ, ಮನೆಯೂಟಕ್ಕೆ ಅವಕಾಶ ನೀಡುವಂತೆ ಕೋರಿರುವಂತ ಅರ್ಜಿಯನ್ನು ವಿಚಾರಣೆ ನಡೆಸಿ, ಹೈಕೋರ್ಟ್ ಯಾವ ತೀರ್ಪು ನೀಡುತ್ತದೆ ಎಂಬುದನ್ನು ಕಾದು ನೋಡಬೇಕಿದೆ.