ಹಾಸನ : ರಾಜ್ಯದಲ್ಲಿ ಇದೀಗ ಮುಂಗಾರು ಜೋರಾಗಿದ್ದು, ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ವರುಣ ಅಬ್ಬರಿಸುತ್ತಿದ್ದು, ರೈತರು ಸಂತಸದಲ್ಲಿದ್ದಾರೆ. ಅಲ್ಲದೆ ಮಳೆಯಿಂದ ಹಲವಾರು ಕಡೆ ಅವಾಂತರ ಸೃಷ್ಟಿಯಾಗಿದ್ದು, ಇದೀಗ ಹಾಸನ ಜಿಲ್ಲೆಯ ಸಕಲೇಶಪುರದಲ್ಲಿ ಭೂ ಕುಸಿತ ಉಂಟಾಗಿದೆ.
ಕಳೆದ ನಾಲ್ಕೈದು ದಿನಗಳಿಂದ ಮಲೆನಾಡಿನಲ್ಲಿ ಮಳೆಯ ಅಬ್ಬರ ಹೆಚ್ಚಾಗಿದೆ. ಸಕಲೇಶಪುರ ಸಮೀಪದ ಮಳೆಯಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೂ ಕುಸಿತ ಉಂಟಾಗಿದೆ. ಈ ಮೂಲಕ ವಾಹನ ಸವಾರರು ಭಯದಿಂದಲೇ ಸಂಚಾರ ನಡೆಸಬೇಕಿದೆ.
ಭಾರೀ ಮಳೆಯಿಂದ ಕೊಲ್ಲಹಳ್ಳಿ ಬಳಿ ತಡೆಗೋಡೆ ಕುಸಿತವಾಗಿದೆ. ಸುಮಾರು 25 ಅಡಿಗೂ ಹೆಚ್ಚು ಪ್ರಮಾಣದ ಮಣ್ಣು ಹಾಕಿ ನಿರ್ಮಿಸಿದ್ದ ರಸ್ತೆ ಇದಾಗಿತ್ತು. ಸೂಕ್ತ ತಡೆಗೋಡೆ ನಿರ್ಮಿಸದೆ ಇದ್ದ ಕಾರಣ ಮಣ್ಣು ಕೊಚ್ಚಿ ಹೋಗುತ್ತಿದೆ. 500 ಮೀಟರ್ ಉದ್ದಕ್ಕೆ ರಸ್ತೆಗೆ ಹೊಂದಿಕೊಂದ ತಡೆಗೋಡೆ ಕುಸಿಯುತ್ತಿದ್ದು, ಮಳೆ ಹೆಚ್ಚಾದರೆ ಚತುಷ್ಪಥ ರಸ್ತೆಯ ಒಂದು ಭಾಗದ ಕಾಂಕ್ರಿಟ್ ರಸ್ತೆಯೇ ಕೊಚ್ಚಿ ಹೋಗುವ ಆತಂಕ ಎದುರಾಗಿದೆ.
ಅಲ್ಲದೆ ನಿನ್ನೆ ಉತ್ತರಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರಿನಲ್ಲಿ ರಾಷ್ಟೀಯ ಹೆದ್ದಾರಿ 66 ರಲ್ಲಿ ಗುಡ್ಡ ಕುಸಿದು ಭಾರಿ ದುರಂತವೊಂದು ಸಂಭವಿಸಿದ್ದು, ಮಕ್ಕಳು 2 ಕುಟುಂಬ ಸೇರಿದಂತೆ ಹಲವರು ಮೃತಪಟ್ಟಿದ್ದಾರೆ. ಹೀಗಾಗಿ ಈ ಒಂದು ಭಾಗದಲ್ಲಿ ಪ್ರಯಾಣಕ್ಕ್ಕೆ ತೆರಳುವ ಪ್ರವಾಸಿಗರು ಆದಷ್ಟು ಎಚ್ಚರಿಕೆ ಯಿಂದ ಇರುವುದು ಸೂಕ್ತ.